ಕಬ್ಬು ಬೆಳೆಗಾರರ ಸಂಘ ಮುಖಂಡರಿoದ ಪ್ರತಿಭಟನೆ
ಚಾಮರಾಜನಗರ: ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸೋಮವಾರ ಬೆಳಗ್ಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯದಲ್ಲಿ ೩೦ ಲಕ್ಷ ಕಬ್ಬು ಬೆಳೆಗಾರರಿದ್ದಾರೆ. ಕರ್ನಾಟಕ ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಬರುವ ಪಂಜಾಬ್‌ನಲ್ಲಿ ಟನ್ ಕಬ್ಬಿಗೆ ೩೮೦೦ ರೂ., ಉತ್ತರ ಪ್ರದೇಶದಲ್ಲಿ ೩೫೦೦ ರೂ., ಗುಜರಾತ್‌ನಲ್ಲಿ ೪೪೦೦ ರೂ. ದರ ನಿಗದಿ ಮಾಡಿದ್ದಾರೆ ಇದನ್ನು ಗಮನಿಸಿ ರಾಜ್ಯದಲ್ಲೂ ಎಫ್‌ಆರ್‌ಪಿ ಬೆಲೆಯನ್ನು ಕನಿಷ್ಠ ೩೫೦೦ ರೂ.ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಕಬ್ಬು ಕಟಾವು ಮಾಡದೆ ೧೬ ತಿಂಗಳಾಗುತ್ತಿದೆ. ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿ.ಮೀ. ಆಧಾರದ ದರ ಕಡಿತ ಮಾಡಬೇಕು ಎಂದರು.
ರೈತ ಮತ್ತು ಕಾರ್ಖಾನೆ ನಡುವೆ ಸರ್ಕಾರ ಜಾರಿಗೆ ತಂದಿರುವ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಬೇಕು. ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಸಕೂಡದು ಎಂದು ಒತ್ತಾಯಿಸಿದರು.
ಬ್ಯಾಂಕ್‌ಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಸರ್ಕಾರ ನೀಡುವ ಪರಿಹಾರ, ಪ್ರೋತ್ಸಾಹ ಧನ, ವಿಧವಾ ವೇತನ, ವೃದ್ಧಾಪ್ಯ ವೇತನದ ಹಣವನ್ನು ಸಾಲದ ಖಾತೆಗಳಿಗೆ ಜಮಾ ಮಾಡಬಾರದು ಎಂದು ಒತ್ತಾಯಿಸಿದರು.





