ಜಿಲ್ಲೆಗಳು

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡದಿದ್ದಲ್ಲಿ ರೈತರ ಪ್ರತಿಭಟನೆಯ ಹಾದಿ ಬದಲಾಗಲಿದೆ : ಸರ್ಕಾರಕ್ಕೆ ನಿರ್ಮಲಶ್ರೀ ಎಚ್ಚರಿಕೆ

ಮಂಡ್ಯ: ಟನ್ ಕಬ್ಬಿಗೆ ಸರ್ಕಾರ ಶೀಘ್ರ ವೈಜ್ಞಾನಿಕ ಬೆಲೆ ನಿಗದಿ ಮಾಡದಿದ್ದರೆ ರೈತರ ಧ್ವನಿ ಹಾಗೂ ಪ್ರತಿಭಟನೆಯ ಹಾದಿ ಬದಲಾಗುವ ಸೂಚನೆ ಇದೆ ಎಂದು ಆದಿಚುಂಚನಗಿರಿ ಮಠಾಧೀಶ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಎಚ್ಚರಿಕೆ ನೀಡಿದರು. ನಗರದ ಕರ್ನಾಟಕ ಸಂಘದ ಆವರಣದಲ್ಲಿ ನಡೆದ ೨೫ನೇ ವರ್ಷದ ದೇವಮ್ಮ ಇಂಡುವಾಳ ಎಚ್.ಹೊನ್ನಯ್ಯ, ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಮತ್ತು ಎಚ್. ಶಾರದಮ್ಮ ಮತ್ತು ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಕಬ್ಬು ಕೃಷಿಗೆ ವ್ಯಯ ಮಾಡುವ ಖರ್ಚು ಹಾಗೂ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ನೀಡುವ ಬೆಲೆಗೂ ಸಾಕಷ್ಟು ಅಂತರವಿದೆ. ಹೀಗಾಗಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಈ ವಿಚಾರವನ್ನು ಪ್ರಸ್ತಾಪಿಸಿ ಬೆಲೆಗಳ ಅಂತರ ಸರಿದೂಗಿಸುವ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಮೀಸಲಾತಿ ಸರಿಪಡಿಸಲಿ:
ಒಕ್ಕಲಿಗರ ಮೀಸಲಾತಿ ವಿಚಾರದಲ್ಲಿ ಪ್ರಾರಂಭದಿAದಲೂ ನಮ್ಮ ಮಕ್ಕಳಿಗೆ ಆಗುತ್ತಿರುವ ಅನ್ಯಾಯವನ್ನು ಮನಗಂಡು ಎಸ್.ಟಿ. ಸೋಮಶೇಖರ್ ಧ್ವನಿ ಎತ್ತಿ ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದರ ಬಗ್ಗೆ ಸದನದಲ್ಲಿ ಮತ್ತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸರಿಪಡಿಸಬೇಕು. ಇಲ್ಲದಿದ್ದರೆ ಒಕ್ಕಲಿಗರ ಕೂಗನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪುಸ್ತಕಗಳು ಬಹಳ ಮುಖ್ಯ. ಕಳೆದು ಹೋಗಿರುವ ವಿಷಯಗಳು ಹಾಗು ಮಹನೀಯರ ಬಗ್ಗೆ ತಿಳಿದುಕೊಳ್ಳಬಹುದು. ಅಲ್ಲದೆ, ಮಕ್ಕಳಿಗೆ ಮಹನೀಯರ ತತ್ವ-ಆದರ್ಶಗಳ ಬಗ್ಗೆ ತಿಳಿಸಬಹುದು. ಆದರೆ, ನಾವು ಅಧಿಕಾರ ವಹಿಸಿಕೊಂಡ ಮಾತ್ರಕ್ಕೆ ಇದೆಲ್ಲವನ್ನೂ ಮರೆಯುತ್ತಿದ್ದೇವೆ ಎಂದು ಹೇಳಿದರು.
ಡಿ.ವಿ.ಜಿ. ಅವರು ಬರೆದ ಕಗ್ಗದಂತೆ ಬದುಕಿದವರು ಇಂಡುವಾಳು ಎಚ್. ಹೊನ್ನಪ್ಪ ಅವರ ತಂದೆ ಎಚ್.ಹೊನ್ನಯ್ಯ ಅವರು. ಅವರು ನೇರವಾದಿಗಳಾಗಿದ್ದರು ಎಂದು ಸ್ಮರಿಸಿದರು.
ರಾಮನವಮಿ ಹಬ್ಬಕ್ಕಿಂತ ಹನುಮ ಜುಯಂತಿಯನ್ನು ಬೀದಿ ಬೀದಿಯಲ್ಲಿ ಆಚರಿಸುತ್ತಾರೆ. ಹನುಮ ಕನ್ನಡ ನಾಡಿನ ಮಣ್ಣಿನ ಮಗ ಎಂಬುದು ಒಂದುಕಡೆಯಾದರೆ, ಹನುಮ ಭಕ್ತಿಗೆ ಹೆಸರಾದವನು. ಎಲ್ಲರೂ ಹನುಮನ ರೀತಿ ಭಕ್ತಿ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾತನಾಡಿ, ಬೆಂಗಳೂರಿನಲ್ಲಿ ಕಸ ಸ್ವಚ್ಛಗೊಳಿಸಲು ಸಾವಿರಾರು ಕೋಟಿ ಖರ್ಚು ಮಾಡಲಾಗುತ್ತಿದೆ. ಆದರೆ, ಮೈಸೂರಿನ ಮುಡಾ ಮಾಜಿ ಅಧ್ಯಕ್ಷ ಮಾದೇಗೌಡರು ಮೈಸೂರಿನ ಒಂದು ವಾರ್ಡ್ನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಕಸವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡುತ್ತಿದ್ದಾರೆ. ಇವರನ್ನು ನೋಡಿ ನಮ್ಮ ನಗರಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳನ್ನು ಕರೆಸಿ ತಿಳಿಸಿದ್ದೇನೆ ಎಂದರು.
ಮಾದೇಗೌಡರು ಮುಡಾ ಅಧ್ಯಕ್ಷರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದರು. ಆದರೆ, ನಂತರ ಬಂದ ಅಧ್ಯಕ್ಷರು ಅದನ್ನು ಸರಿಯಾಗಿ ತೆಗೆದುಕೊಂಡು ಹೋಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೊರೊನಾ ಸಂದರ್ಭ ವೈದ್ಯರು ಮತ್ತು ಶುಶ್ರೂಷಕಿಯರ ಪಾತ್ರ ಏನೆಂದು ಎಲ್ಲರಿಗೂ ಗೊತ್ತಾಗಿದೆ. ಈ ಸನ್ಮಾನಕ್ಕೆ ವೈದ್ಯೆ ತಾರಾ ಅವರು ಸೂಕ್ತ ವ್ಯಕ್ತಿ ಎಂದು ಬಣ್ಣಿಸಿದರು. ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರು ಸದನಕ್ಕೆ ಬಂದ ಮೊದಲ ದಿನವೇ ಯಶಸ್ವಿ ಯೋಜನೆಯ ಲೋಪಗಳ ಬಗ್ಗೆ ನಮ್ಮ ಗಮನಕ್ಕೆ ತಂದಿದ್ದಾರೆ. ಅದೇ ಪ್ರಕಾರ ಯಶಸ್ವಿನಿ ಯೋಜನೆಯನ್ನು ಬದಲಾವಣೆ ಮಾಡಿ ಕಾರ್ಯರೂಪಕ್ಕೆ ತರುತ್ತಿದ್ದೇವೆ ಎಂದರು. ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಅವರು ಉತ್ತಮ ವಾಗ್ಮಿಗಳು, ಇಂತಹವರು ಸದನದಲ್ಲಿ ಇರಬೇಕಾಗಿತ್ತು. ಇಂತಹವರಿAದ ಮಂಡ್ಯ ಇನ್ನೂ ಅಭಿವೃದ್ಧಿಯಾಗುತ್ತಿತ್ತು. ಆದರೆ, ಏನು ಮಾಡುವುದು ಬದಲಾದ ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರಿಗೆ ರಾಜ್ಯಮಟ್ಟದ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ಟಿ.ಎಂ.ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಟಿ.ಜೆ.ತಾರಾ ಅವರಿಗೆ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವೇದಿಕೆಯಲ್ಲಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶಾಸಕರಾದ ಎಂ.ಶ್ರೀನಿವಾಸ್, ಮಧು ಜಿ.ಮಾದೇಗೌಡ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ. ಉಮೇಶ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ.ಜಯಪ್ರಕಾಶಗೌಡ ಇತರರು ಉಪಸ್ಥಿತರಿದ್ದರು.


ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ನನ್ನ ಬೆಂಬಲ
ಒಕ್ಕಲಿಗರ ಮೀಸಲಾತಿಯನ್ನು ಶೇ. ೧೨ ರಿಂದ ೧೫ಕ್ಕೆ ಹೆಚ್ಚಳದ ಬಗ್ಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಚರ್ಚೆ ನಡೆಸಿ, ಸರ್ಕಾರದ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ. ನಮ್ಮ ಸಮಾಜಕ್ಕೆ ತೊಂದರೆಯಾದರೆ ಸುಮ್ಮನೆ ಕೂರಲ್ಲ, ನಮ್ಮ ಸಮಾಜಕ್ಕಾಗಿ ಏನು ಬೇಕಾದರೂ ಕ್ರಮ ಕೈಗೊಳ್ಳುತ್ತೇನೆ. ಒಕ್ಕಲಿಗರ ಮೀಸಲಾತಿ ವಿಚಾರದಲ್ಲಿ ಸ್ವಾಮೀಜಿ ಪರ ನಾವೆಲ್ಲರೂ ನಿಲ್ಲಬೇಕಾಗುತ್ತದೆ, ಇದರಿಂದ ಅವರಿಗೆ ಇನ್ನಷ್ಟು ಶಕ್ತಿ ಬರುತ್ತದೆ.
– ಎಸ್.ಟಿ. ಸೋಮಶೇಖರ್, ಸಹಕಾರ ಸಚಿವರು 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago