ಮೈಸೂರು : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿರುವ ಕಬ್ಬು ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡೆಯನ್ನು ಖಂಡಿಸಿ ಅ.27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ತಿಳಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.