ಮೈಸೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾನುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಹಾಗೂ ರೈತರು, ಕಬ್ಬು ಬೆಳೆಗಾರರ ಸಂಘದ ಮುಖಂಡರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಕಳೆದ ೫ ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿಯನ್ನು ನಡೆಯುತ್ತಿತ್ತು. ಆದರೆ, ಸರ್ಕಾರ ಪೊಲೀಸರ ಮೂಲಕ ಧರಣಿಯನ್ನು ಹತ್ತಿಕ್ಕಿ ರಾಜ್ಯಾಧ್ಯಕ್ಷರು ಮತ್ತು ರೈತ ಮುಖಂಡರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಪ್ರತಿ ಟನ್ ಕಬ್ಬಿಗೆ ೩೦೫೦ ಎಫ್.ಆರ್.ಪಿ ದರವನ್ನು ನಿಗದಿ ಮಾಡಿದೆ. ಇದು ಅವೈಜ್ಞಾನಿಕ ಬೆಲೆ ಎಂದು ಖಂಡಿಸಿ ಬೆಂಗಳೂರನಲ್ಲಿ ಅಹೋರಾತ್ರಿ ಧರಣಿ ಕೈಗೊಂಡಿತ್ತು. ಆದರೆ, ಸರ್ಕಾರ ಪೊಲೀಸ್ ಬಲವನ್ನು ಬಳಸಿ ಧರಣಿ ನಿರತರನ್ನು ಬಂಧಿಸುವುದರ ಮೂಲಕ ರಾಜ್ಯದ ರೈತಾಪಿ ವರ್ಗಕ್ಕೆ ಅಪಮಾನ ಮಾಡಿದೆ ಎಂದರು.
ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇವಲ ಮೂರು ಜಿಲ್ಲೆಗಳಿಗೆ ಮಾತ್ರ ಪ್ರತಿ ಕ್ವಿಂಟಾಲ್‌ಗೆ ೫೦೦ ರೂ. ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಉಳಿದ ಜಿಲ್ಲೆಯ ಭತ್ತ ಬೆಳೆಗಾರರಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಲಕ್ಷ್ಮೀಪುರ ವೆಂಕಟೇಶ್, ಕಾಟೂರು ಮಹದೇವಸ್ವಾಮಿ, ವರಕೋಡು ನಾಗೇಶ್, ಜಯರಾಮ್, ಬಸವರಾಜ್ ಸಾತಗಳ್ಳಿ, ರಾಜೇಶ್ ಹಂಪಾಪುರ, ದೇವಮಣಿ, ವಾಜಮಂಗಲ ಮಹದೇವು, ಜಯರಾಮು ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…