ಜಿಲ್ಲೆಗಳು

ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳಕ್ಕೆ ಆಗ್ರಹ

ಕಬ್ಬು ಬೆಳೆಗಾರರ ಸಂಘ ಮುಖಂಡರಿoದ ಪ್ರತಿಭಟನೆ 

ಚಾಮರಾಜನಗರ: ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸೋಮವಾರ ಬೆಳಗ್ಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯದಲ್ಲಿ ೩೦ ಲಕ್ಷ ಕಬ್ಬು ಬೆಳೆಗಾರರಿದ್ದಾರೆ. ಕರ್ನಾಟಕ ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಬರುವ ಪಂಜಾಬ್‌ನಲ್ಲಿ ಟನ್ ಕಬ್ಬಿಗೆ ೩೮೦೦ ರೂ., ಉತ್ತರ ಪ್ರದೇಶದಲ್ಲಿ ೩೫೦೦ ರೂ., ಗುಜರಾತ್‌ನಲ್ಲಿ ೪೪೦೦ ರೂ. ದರ ನಿಗದಿ ಮಾಡಿದ್ದಾರೆ ಇದನ್ನು ಗಮನಿಸಿ ರಾಜ್ಯದಲ್ಲೂ ಎಫ್‌ಆರ್‌ಪಿ ಬೆಲೆಯನ್ನು ಕನಿಷ್ಠ ೩೫೦೦ ರೂ.ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಕಬ್ಬು ಕಟಾವು ಮಾಡದೆ ೧೬ ತಿಂಗಳಾಗುತ್ತಿದೆ. ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿ.ಮೀ. ಆಧಾರದ ದರ ಕಡಿತ ಮಾಡಬೇಕು ಎಂದರು.
ರೈತ ಮತ್ತು ಕಾರ್ಖಾನೆ ನಡುವೆ ಸರ್ಕಾರ ಜಾರಿಗೆ ತಂದಿರುವ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಬೇಕು. ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಸಕೂಡದು ಎಂದು ಒತ್ತಾಯಿಸಿದರು.
ಬ್ಯಾಂಕ್‌ಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಸರ್ಕಾರ ನೀಡುವ ಪರಿಹಾರ, ಪ್ರೋತ್ಸಾಹ ಧನ, ವಿಧವಾ ವೇತನ, ವೃದ್ಧಾಪ್ಯ ವೇತನದ ಹಣವನ್ನು ಸಾಲದ ಖಾತೆಗಳಿಗೆ ಜಮಾ ಮಾಡಬಾರದು ಎಂದು ಒತ್ತಾಯಿಸಿದರು.

andolanait

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

1 hour ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

2 hours ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

2 hours ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

3 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

4 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

4 hours ago