ಜಿಲ್ಲೆಗಳು

ವಿದ್ಯುತ್‌ ಅವಘಡದಿಂದ ಕಬ್ಬಿನ ಗದ್ದೆಗೆ ಬೆಂಕಿ : ರಸ್ತೆ ತಡೆದು ರೈತರ ಪ್ರತಿಭಟನೆ

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ.

ಲೊಕ್ಕನಹಳ್ಳಿ ಗ್ರಾಮದ ಮೇಲು ಸ್ವಾಮಿ, ರುಕ್ಮಿಣಿ, ಸತೀಶ್ ಕುಮಾರ್ ರವರು ತಮ್ಮ ಜಮೀನುಗಳಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಬೆಳೆದು 18 ತಿಂಗಳಾಗಿದ್ದರೂ ಸಹ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯವರು ಕಬ್ಬು ಕಟಾವು ಮಾಡದೇ ಇರುವುದರಿಂದ ಈ ದುರ್ಘಟನೆ ನಡೆದಿದೆ. ನಮ್ಮ ಈ ನಷ್ಟಕ್ಕೆ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆ ಅವರು ಪರಿಹಾರ ನೀಡಬೇಕು. ಚಾಮರಾಜನಗರ ಜಿಲ್ಲಾಧಿಕಾರಿಗಳು,ಜಿಲ್ಲಾ ಉಸ್ತುವಾರಿ ಸಚಿವರು ತಹಸಿಲ್ದಾರ್ ರವರು ಸ್ಥಳಕ್ಕೆ ಆಗಮಿಸಿ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು ಇಲ್ಲದಿದ್ದರೆ ಸ್ಥಳದಲ್ಲೇ ಸೀಮೆಎಣ್ಣೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಸತೀಶ್ ಕುಮಾರ್ ಮಾತನಾಡಿ ನಾವು ಕಬ್ಬು ಬೆಳೆದು 18 ತಿಂಗಳಗಳಾಗಿದೆ ಆದರೂ ಸಹ ಇದುವರೆಗೂ ಕಬ್ಬು ಕಟಾವು ಮಾಡಿಲ್ಲ, ಈ ಘಟನೆಗೆ ಬಣ್ಣಾರಿ ಅಮ್ಮನ ಕಾರ್ಖಾನೆಯವರೇ ನೇರ ಹೊಣೆ, ಜಮೀನಿನಲ್ಲಿದ್ದ ಹನಿ ನೀರಾವರಿ ಪೈಪ್, ಸ್ಟಾರ್ಟರ್, ಸ್ಪಿಂಕ್ಲರ್ ಪೈಪ್, ಮೋಟಾರ್ ಕೇಬಲ್ ಗಳು ಸುಟ್ಟು ಹೋಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಸಂಬಂಧಿಸಿದವರು ಸ್ಥಳಕ್ಕಾಗಿ ಸೂಕ್ತ ಪರಿಹಾರ ಕೊಡದಿದ್ದರೆ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ರೈತ ಮುತ್ತುವೇಲ್ ಮಾತನಾಡಿ ಲೋಕನಹಳ್ಳಿ ಭಾಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಕಬ್ಬು ಬೆಳೆದಿದ್ದೇವೆ. 18 ತಿಂಗಳುಗಳಾದರು ಕಬ್ಬು ಕಟಾವು ಮಾಡಿಲ್ಲ ಇದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಟ್ರಾಫಿಕ್ ಜಾಮ್ : ಲೊಕ್ಕನಹಳ್ಳಿ ಗ್ರಾಮದ ರೈತರುಗಳ ಇಪ್ಪತ್ತಕ್ಕೂ ಹೆಚ್ಚು ಎಕರೆ ಕಬ್ಬು, ಬೆಂಕಿಗಹುತಿಯಾಗಿರುವುದನ್ನು ಖಂಡಿಸಿ ಲೋಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟಿಸುತ್ತಿದ್ದ ಹಿನ್ನೆಲೆ ನೂರಾರುವಾಹನಗಳು ನಿಂತಲ್ಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ತರಕಾರಿ ವಾಹನಗಳು ಬಸ್ ಗಳು, ದ್ವಿಚಕ್ರ ವಾಹನ, ಕಾರುಗಳು ಸುಮಾರು ಒಂದು ಕಿಲೋಮೀಟರ್ ವರೆಗೂ ವಾಹನಗಳು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

44 mins ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

45 mins ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

2 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

2 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

2 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

2 hours ago