ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ‍್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ 17 ಬಿಜೆಪಿ ಕಾರ್ಯಕರ್ತರಿಗೆ ಪಾಂಡವಪುರ ಜೆಎಂಎಫ್‌ಸಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲು ಪಾಂಡವಪುರದಿಂದ ಮಂಗಳೂರಿಗೆ ಬೈಕ್ ರ‍್ಯಾಲಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಈ ಕಾರ್ಯಕರ್ತರನ್ನು ತಡೆದು ಎಫ್‌ಐಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಗೆ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದ್ದು, ಈ ಪ್ರಕ್ರಿಯೆ ಡಿಸೆಂಬರ್ ತಿಂಗಳಿನಲ್ಲಿಯೇ ನಡೆಯಲಾಗಿದ್ದು ಮಾಹಿತಿ ಈಗ ಹೊರಬಿದ್ದಿದೆ.