ಜಿಲ್ಲೆಗಳು

ರೋಹಿಣಿ ಸಿಂಧೂರಿ ಕುರಿತ ಪೋಸ್ಟ್‌ ಡಿಲೀಟ್‌ ಮಾಡಲು ಡಿ. ರೂಪಾಗೆ 1 ದಿನ ಗಡುವು ನೀಡಿದ ಸುಪ್ರೀಂ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಕಿತ್ತಾಟ ಇದೀಗ ಸುಪ್ರೀಂ ಹಂತದವರೆಗೂ ತಲುಪಿದೆ. ಡಿ ರೂಪಾ ಅವರು ರೋಹಿಣಿ ಸಿಂಧೂರಿ ಅವರ ಆಕ್ಷೇಪಾರ್ಹ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕೆಂದು ಡಿ ರೂಪಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.‌ ರೂಪಾ ಪರ ವಾದ ಮಂಡಿಸಿದ ವಕೀಲರು ರೋಹಿಣಿ ಸಿಂಧೂರಿ ಅವರು ಪುರುಷ ಅಧಿಕಾರಿಗಳಿಗೆ ತಮ್ಮ ಫೋಟೊಗಳನ್ನು ಕಳುಹಿಸುತ್ತಾರೆ ಎಂದು ಆರೋಪಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸುಪ್ರೀಂ ಕೋರ್ಟ್‌ ಈ ರೀತಿಯ ವಾದಗಳನ್ನು ಆಲಿಸಿ ನಾವು ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಭಾವಿಸಬೇಡಿ ಎಂದಿದೆ. ನಾವು ಇಲ್ಲಿ ಸರ್ಕಾರ ನಡೆಸುತ್ತಿಲ್ಲ ಹಾಗೂ ನ್ಯಾಯಾಲಯದಲ್ಲಿ ಭಾವನೆಗಳಿಗೆ ಬೆಲೆಯಿಲ್ಲ ಎಂಬುದನ್ನು ಇಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿತು.

ಬಳಿಕ ತನ್ನ ತೀರ್ಮಾನವನ್ನು ಪ್ರಕಟಿಸಿದ ಸುಪ್ರೀಂ ನಾಳೆ ಒಳಗೆ ರೋಹಿಣಿ ಸಿಂಧೂರಿ ಕುರಿತು ಪ್ರಕಟಿಸಿರುವ ಪೋಸ್ಟ್‌ ಡಿಲೀಟ್‌ ಮಾಡಿ, ಪೋಸ್ಟ್‌ ಡಿಲೀಟ್‌ ಮಾಡಲು ಇಷ್ಟವಿಲ್ಲವಾದರೆ ಪೋಸ್ಟ್‌ ಹಿಂಪಡೆಯಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಬಹುದು ಎಂದು ತಿಳಿಸಿದರು.

ಏನಿದು ಆಕ್ಷೇಪಾರ್ಹ ಪೋಸ್ಟ್‌?

ಇದೇ ವರ್ಷದ ಫೆಬ್ರವರಿ 14 ಹಾಗೂ 16ರಂದು ಐಪಿಎಸ್‌ ಅಧಿಕಾರಿ ಡಿ ರೂಪಾ ಅವರು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ರೋಹಿಣಿ ಸಿಂಧೂರಿ ಅವರ ಫೋಟೊಗಳನ್ನು ಹಂಚಿಕೊಂಡು ಹಲವು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳು ತುಂಬಾ ಕೀಳು ಮಟ್ಟದಲ್ಲಿವೆ ಎಂದು ಆಕ್ರೋಶ ಹೊರಹಾಕಿದ್ದ ರೋಹಿಣಿ ಸಿಂಧೂರಿ ಕ್ರಿಮಿನಲ್‌ ಮೊಕದ್ದಮೆ ಹೂಡಿದ್ದರು.

andolana

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago