ಮಡಿಕೇರಿ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು ‘ಸೂರ್ಯ ನಮಸ್ಕಾರ ಚಾಲೆಂಜ್’ ಸ್ಪರ್ಧೆ ನಡೆಯಲಿದೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸ್ಪರ್ಧೆಯನ್ನು ಉದ್ಯಮಿ ಜಿ.ಲಕ್ಷ್ಮಿ ರೆಡ್ಡಿ ಉದ್ಘಾಟಿಸುವುರು. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷರಾದ ಸೌಮ್ಯ ಬಾಲು ಅಧ್ಯಕ್ಷತೆ ವಹಿಸುವುರು.
ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್, ಅಂತರರಾಷ್ಟ್ರೀಯ ಯೋಗಪಟು ಅಮೃತ್ ರಾಕೇಶ್, ಹಾತೂರು ಗ್ರಾ.ಪಂ. ಅಧ್ಯಕ್ಷ ಗುಮ್ಮಟ್ಟೀರ ದರ್ಶನ್ ನಂಜಪ್ಪ, ನ್ಯಾಷನಲ್ ಅಕಾಡೆಮಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶಾಂತಿ ಅಚ್ಚಪ್ಪ, ಪೊನ್ನಂಪೇಟೆ ನಾಗರಿಕರ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ ಪಾಲ್ಗೊಳ್ಳುವರು.
ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮೊ.ಸಂ.೭೦೦೯೮೬೫೧೧೯, ೭೫೫೮೫೪೦೮೦೧ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…