ಮೈಸೂರು: ಸೂರ್ಯಗ್ರಹಣ ಕಾರಣದಿಂದ ನಗರದ ಬಹುತೇಕ ಮಂದಿ ಮಂಗಳವಾರ ಮಧ್ಯಾಹ್ನದ ನಂತರ ಹೊರಗೆ ಬಾರದೆ ಮನೆಯಲ್ಲೇ ಇದ್ದರೆ, ಹಲವು ಪ್ರಗತಿಪರರು ಬೀದಿಗೇ ಬಂದು ಆರಾಮವಾಗಿ ಉಪಾಹಾರ ಸೇವಿಸಿದರು!
ನಗರದ ಅಶೋಕಪುರಂ ಸನಿಹದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದ ಬಳಿ ಇರುವ ಚೈತ್ರ ಮಿಲ್ಕ್ ಸೆಂಟರ್ ಮುಂಭಾಗದಲ್ಲಿ ಸೂರ್ಯಗ್ರಹಣ ಪ್ರಕ್ರಿಯೆ ಸಮಯದಲ್ಲೇ ಲೇಖಕ ಸಿದ್ದಸ್ವಾಮಿ ಅವರ ನೇತೃತ್ವದಲ್ಲಿ ಜಮಾವಣೆಗೊಂಡ ಹಲವು ಪ್ರಗತಿಪರರು, ಉಪ್ಪಿಟ್ಟು, ಕೇಸರಿಬಾತ್ ಸೇವಿಸಿದರು.
ಸೂರ್ಯಗ್ರಹಣ ಸಮಯದಲ್ಲಿ ಮನೆಯಿಂದ ಹೊರಗೆ ಹೋಗಬಾರದು, ಆಹಾರ ಸೇವಿಸಬಾರದು ಎಂಬುದು ಮೌಢ್ಯತನದ ಪರಮಾವಧಿ. ಅದನ್ನು ಬಯಲು ಮಾಡುವ ಉದ್ದೇಶದಿಂದ ಈ ಉಪಾಹಾ ಸೇವನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಪ್ರಗತಿಪರರು ಹೇಳಿದ್ದಾರೆ.
ನಗರಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಕವಿ ಹೊರಳವಾಡಿ ನಂಜುಂಡಸ್ವಾಮಿ, ಪಿ.ರಾಜು ಸೇರಿದಂತೆ ೨೦ಕ್ಕೂ ಹೆಚ್ಚು ಮಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…
ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…