ಜಿಲ್ಲೆಗಳು

ಕರ್ತವ್ಯಲೋಪ: ಇಂಡುವಾಳು PDO ಅಮಾನತು

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ ಸ್ವೀಕೃತವಾಗಿರುವ ಮೊತ್ತವನ್ನು ಪ್ರಾಧಿಕಾರದ ಅನುಮತಿ ಪಡೆಯದೆ ನಿಯಮಬಾಹಿರವಾಗಿ ವೆಚ್ಚ ಮಾಡಿದ್ದರು. ಗ್ರಾಮ ಪಂಚಾಯಿತಿ ನಿಧಿ-೨ರ ಖಾತೆಯಿಂದ ವೆಚ್ಚ ಭರಿಸಿರುವುದಕ್ಕೆ ಅಗತ್ಯ ದಾಖಲಾತಿ ಸಲ್ಲಿಸದಿರುವುದು ಹಾಗೂ ಬಿಡುಗಡೆಗೊಂಡ ಸದಸ್ಯರ ಗೌರವಧನ ಅನುದಾನ ಮೊತ್ತವನ್ನು ಇತರೆ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ.
೧೫ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವುದು ಹಾಗೂ ಗ್ರಾಮ ಪಂಚಾಯಿತಿ ಅನುದಾನಗಳನ್ನು ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವ ಬಗ್ಗೆ ಆರೋಪ ಸಾಬೀತಾಗಿದೆ. ಪಂಚಾಯಿತಿಯಲ್ಲಿ ಸುಮಾರು ೩೯ ಲಕ್ಷದಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಸದಸ್ಯರು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ಸಲ್ಲಿಸಿದ್ದರು.
ಕರ್ತವ್ಯಲೋಪವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ೧೯೫೭ರ ನಿಯಮ ೧೦(೧) ರಡಿ ಪ್ರÀದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಪಿಡಿಒ ಸಿದ್ದರಾಜು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಹಿಂದೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎ.ಎಸ್.ಸಿದ್ದರಾಜು ಅವರು ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಸಿಕ್ಕಿ ಬಿದ್ದಿದ್ದು, ಕರ್ತವ್ಯದಿಂದ ಅಮಾನತುಗೊಂಡಿದ್ದರು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago