ಬೆಂಗಳೂರು: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರ ಸಂಬಂಧಿ ಕೂಡ ಆಗಿದ್ದರು.
ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಂಡುಬಂದಿದೆ. ನಂತರ ಕೆಆರ್ ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪರಪ್ಪನ ಅಗ್ರಹಾರ ಠಾಣೆಯಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ನಂತರ ಆನೇಕಲ್‌ನಲ್ಲಿ ಇನ್ಸ್‌ಪೆಕ್ಟರ್ ಆಗಿದ್ದಾಗ ಅವಧಿ ಮೀರಿ ಪಬ್ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಅಮಾನತು ಆಗಿದ್ದರು.
ಕೆ.ಆರ್.ಪುರಂನಲ್ಲಿ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಐದು ದಿನದ ಹಿಂದೆಯಷ್ಟೇ ಅಮಾನತುಗೊಂಡಿದ್ದರು.
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…
ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…