ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು. ಸುತ್ತೂರು ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಕೆ.ಜಿ.ಜಾರ್ಜ್, ಕೆ.ವೆಂಕಟೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ದೇಸಿ ಕ್ರೀಡೆಗಳಿಗೆ ಚಾಲನೆ ನೀಡಿದರು.
ನಿನ್ನೆ ( ಫೆಬ್ರವರಿ 6 ) ಆರಂಭವಾಗಿರುವ ಸುತ್ತೂರು ಜಾತ್ರೆ ಆರು ದಿನಗಳ ಕಾಲ ನಡೆಯಲಿದ್ದು, ಫೆಬ್ರವರಿ 11ರಂದು ಈ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಆಚರಣೆ ಜತೆಗೆ ವಿವಿಧ ಕಲೆ, ಸಂಸ್ಕೃತಿ ಹಾಗೂ ಕ್ರೀಡೆಗಳ ಚಟುವಟಿಕೆಗಳನ್ನೂ ಸಹ ಆಯೋಜಿಸಲಾಗಿದ್ದು ಭಕ್ತರಿಗೆ ಮನರಂಜನೆ ಸಹ ಸಿಗಲಿದೆ.
ಇನ್ನು ಇಂದು ಬೆಳಗ್ಗೆ ನವದೆಹಲಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ತಮ್ಮದೇ ನೇತೃತ್ವದಲ್ಲಿ ನಡೆದ ದೆಹಲಿ ಚಲೋನಲ್ಲಿ ಭಾಗವಹಿಸಿದರು. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ತೋರುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಕೇಂದ್ರದ ವಿರುದ್ಧ ಸಮರ ಸಾರಿದ್ದರು.