ಮೈಸೂರು: ಶ್ರೀ ಕ್ಷೇತ್ರ ಸುತ್ತೂರು ಜಾತ್ರೆ ಮಹೋತ್ಸವದಲ್ಲಿ ಕೃಷಿ, ಆರೋಗ್ಯ, ಶೈಕ್ಷಣಿಕ, ಸಾಮಾಜಿಕವಾದಂತಹ ಹಲವು ಕ್ಷೇತ್ರಗಳಲ್ಲಿ ಹೊಸ ಹೊಸ ಅವಿಷ್ಕಾರ ಹಾಗೂ ವಿಷಯಗಳನ್ನು ಜನರಿಗೆ ಅರಿವು ಮೂಡಿಸುತ್ತಿರುವ ಕಾರಣ ಈ ಜಾತ್ರೆಯು ರಾಜ್ಯದಲ್ಲಿ ಮಹತ್ವ ಪಡೆದುಕೊಂಡಿದೆ ಎಂದು ಆಹಾರ ಮತ್ತು ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡುರಾವ್ ಅವರು ಹೇಳಿದ್ದಾರೆ.
ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿಮೇಳ , ಆರೋಗ್ಯ, ತಪಾಸಣಾ ಶಿಬಿರ ಹಾಗೂ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಮತ್ತು ಆಹಾರಕ್ಕೆ ನೇರ ಸಂಪರ್ಕವಿದ್ದು, ಮನುಷ್ಯನಿಗೆ ರೋಗ-ರುಜಿನಗಳು ಬರುತ್ತಿರುವುದು ನಮ್ಮ ಜೀವನ ಶೈಲಿಯಿಂದ ಅದನ್ನು ನಿಯಂತ್ರಿಸಲು ಕೇವಲ ಆಹಾರ ಕ್ರಮದಿಂದ ಮಾತ್ರ ಸಾಧ್ಯ, ಆಹಾರದ ಪದ್ಧತಿಗಳು ಉತ್ತಮವಾಗಿದ್ದರೆ ಆರೋಗ್ಯವು ಕ್ಷೇಮವಾಗಿರುತ್ತದೆ. ಇಂದಿನ ಯುವ ಜನಾಂಗಕ್ಕೆ ಈ ಬಗ್ಗೆ ಹೆಚ್ಚಿನ ಜಾಗೃತಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾತ್ರೆಯಲ್ಲಿ ಆರೋಗ್ಯ ತಪಾಸಣೆ, ಕೃಷಿಮೇಳ, ಆಹಾರ ಮೇಳ ಹಾಗೂ ಆಧ್ಯಾತ್ಮಿಕ ಸಂದೇಶಗಳನ್ನು ತಿಳಿಸುತ್ತಿವೆ ಎಂದಿದ್ದಾರೆ.
ಇನ್ನು ನಿನ್ನೆ ( ಫೆಬ್ರವರಿ 6 ) ಆರಂಭಗೊಂಡಿರುವ ಸುತ್ತೂರು ಜಾತ್ರಾ ಮಹೋತ್ಸವ ಆರು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ಆಚರಣೆ ಜತೆಗೆ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 11ರಂದು ಮುಕ್ತಾಯಗೊಳ್ಳಲಿದೆ.
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…
ಅಮೆರಿಕದ ಸಿಯಾಟಲ್ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…
ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…