ಮಂಡ್ಯ: ಸಾರ್ವಜನಿಕರ ಸಹಭಾಗೀತ್ವದಲ್ಲಿ ಅ.೧ರಿಂದ ೩೧ರವರೆಗೆ ನಡೆಯಲಿರುವ ‘ಸ್ವಚ್ಛ ಭಾರತ ೨.೦’ ಅಭಿಯಾನದಲ್ಲಿ ದೇಶಾದ್ಯಂತ ೧ ಕೋಟಿ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿಗೆ ಗುರಿ ಹೊಂದಲಾಗಿದೆ ಎಂದು ನೆಹರು ಯುವ ಕೇಂದ್ರದ(ಎನ್‌ವೈಕೆ) ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದರು.
ಕಳೆದ ವರ್ಷ ನಡೆದ ‘ಸ್ವಚ್ಛ ಭಾರತ’ ಅಭಿಯಾನದ ಯಶಸ್ಸಿನ ಹಿನ್ನೆಲೆಯಲ್ಲಿ ಈ ವರ್ಷ ಅ.೧ರಿಂದ ‘ಸ್ವಚ್ಛ ಭಾರತ ೨.೦’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಎನ್‌ವೈಕೆ, ಯುವ ಕ್ಲಬ್‌ಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲಕ ದೇಶಾದ್ಯಂತ ಎಲ್ಲ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮುಖ್ಯವಾಗಿ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಪ್ಲಾಸ್ಟಿಕ್ ಬಗ್ಗೆ ಜನಜಾಗೃತಿ ಮೂಡಿಸುವುದು ‘ಸ್ವಚ್ಛ ಭಾರತ ೨.೦’ ಅಭಿಯಾನದ ಉದ್ದೇಶವಾಗಿದೆ. ಗ್ರಾಮ ಮಟ್ಟದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಅನ್ನು ಗ್ರಾಪಂ ಪಿಡಿಒಗೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಮೂಲಕ ನಗರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರು, ಪಟ್ಟಣ ಪ್ರದೇಶಗಳಲ್ಲಿ, ಪುರಸಭೆ/ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ನೀಡಿ, ಎಷ್ಟು ಕಿಲೋ ಪ್ಲಾಸ್ಟಿಕ್ ನೀಡಲಾಗಿದೆ ಎಂಬುದಕ್ಕೆ ಸ್ವೀಕೃತಿ ಪತ್ರ ಪಡೆದುಕೊಳ್ಳಬಹುದು ಎಂದರು.
ದೇಶದ ೭೪೪ ಜಿಲ್ಲೆಗಳಲ್ಲು ‘ಸ್ವಚ್ಛ ಭಾರತ ೨.೦’ ಅಭಿಯಾನ ನಡೆಯುತ್ತಿದೆ. ಕರ್ನಾಟಕದ ೩೧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಈ ಅಭಿಯಾನದಲ್ಲಿ ೪.೧೦ ಲಕ್ಷ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಕೆಲವೆಡೆ ಅಧಿಕ ಪ್ರಮಾಣದಲ್ಲಿ ಪ್ಲಾಸ್ಟಿಕ್ ಸಂಗ್ರಹವಾಗುತ್ತಿದ್ದು, ಅದರ ದಾಸ್ತಾನು ಸವಾಲಾಗಿದೆ. ಹೀಗಾಗಿ ಅಂತಹ ಕಡೆಗಳಲ್ಲಿ ಸ್ಥಳೀಯವಾಗಿಯೇ ಪ್ಲಾಸ್ಟಿಕ್ ವಿಲೇವಾರಿಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾುಂಕ ನಿರ್ದೇಶಕ ಜಿ.ಓಂಪ್ರಕಾಶ್, ವಿವಿಧ ಕಾಲೇಜುಗಳ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ಎಂ.ಕೆ.ಕೆಂಪಮ್ಮ, ಕೆ.ಬಿ.ಲೋಕೇಶ್, ಡಿ.ಉಮೇಶ್, ಎನ್‌ವೈಕೆ ಲೆಕ್ಕಾಧಿಕಾರಿ ಚಿಂದಗಿರಿಗೌಡ, ನಿವೃತ್ತ ಲೆಕ್ಕಾಧಿಕಾರಿ ಬಸವರಾಜು ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…