ಜಿಲ್ಲೆಗಳು

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ : 10 ಲಕ್ಷ ಮಂದಿಗೆ ಉದ್ಯೋಗ : ಸಿಎಂ ಬೊಮ್ಮಾಯಿ

ಬೆಂಗಳೂರು : ಗ್ರಾಮೀಣ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 10 ಲಕ್ಷ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ ಸ್ಥಾಪಿಸಿ 10 ಲಕ್ಷದ ಯೋಜನೆ ಮತ್ತು ಮಾರುಕಟ್ಟೆ ವ್ಯತವಸ್ಥೆಯನ್ನು ಕಲ್ಪಿಸುವ ಮೂಲಕ ಈ ಸಂಘದಲ್ಲಿ ಹಿಂದುಳಿದ ಸಮುದಾಯದ ಯುವಕರಿಗೆ ಹೆಚ್ಚು ಅವಕಾಶವನ್ನು ಕಲ್ಪಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ  ಅರಸು ಅವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಪ್ರತಿ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 5 ಲಕ್ಷ ಯುವಕರು ಮತ್ತು 5 ಲಕ್ಷ ಯುವತಿಯರಿಗೆ ಉದ್ಯೋಗ ನೀಡಲಾಗುವುದು. ಎಂದರು.

ಕರ್ನಾಟಕದ ಇವತ್ತಿನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕದ ಯಶಸ್ಸಿಗೆ ಬಹುಪಾಲು ಅರಸು ಅವರ ದೂರದೃಷ್ಟಿಯೇ ಕಾರಣ.ಮುಖ್ಯಮಂತ್ರಿ ಆದಮೇಲೆ ಭೂ ಸುಧಾರಣೆ ಕಾಯ್ದೆ ಜÁರಿಗೆ ತಂದರು. ಉಳುವವನೇ ಒಡೆಯ ಚಳವಳಿಗೆ ಕಾನೂನಿನ ಶಕ್ತಿ ತುಂಬಿದರು. ಜನತಾ ಮನೆ, ಪಡಿತರ ವ್ಯವಸ್ಥೆ ಆರಂಭವಾಗಿದ್ದು ಅರಸು ಕಾಲದಲ್ಲಿ ವ್ಯವಸಾಯದಲ್ಲಿ ಸುಧಾರಣೆ ತಂದಿದ್ದು ಅರಸು ಅವರು. ಕಾಳಿ ವಿದ್ಯುತ್ ಯೋಜನೆ ತಂದರು, ಸಣ್ಣ ಸಣ್ಣ ಸಮಾಜದಲ್ಲಿನವರನ್ನ ಗುರುತಿಸಿ ನಾಯಕತ್ವ ಬೆಳೆಸಿದರು, ಸಾಮಾಜಿಕ ನ್ಯಾಯ ಪ್ರತಿಪಾದಿಸಿ ಜÁರಿಗೆ ತಂದರು. ಆದರೆ ಇಂದು ಸಾಮಾಜಿಕ ನ್ಯಾಯ ಪ್ರತಿಪಾದನೆ ಕೇವಲ ಭಾಷಣಕ್ಕೆ ಸೀಮಿತವಾಗಿದೆ ಎಂದು ವಿಷಾದಿಸಿದರು.


ಸಮಾಜದ ಕಟ್ಟಕಡೆಯವರಿಗೆ ನ್ಯಾಯ ಸಿಗಬೇಕಿದೆ. 2439 ಹಾಸ್ಟೆಲ್ ಗಳು ರಾಜ್ಯದಲ್ಲಿವೆ ಇವುಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ದೇವರಾಜ ಅರಸು ಹೆಸರಲ್ಲಿ ಪಿಹೆಚ್‍ಡಿ ಮಾಡುತ್ತಿರುವವರಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದು ತಿಳಿಸಿದರು. ಈವರೆಗೆ ನಿಂತುಹೋಗಿದ್ದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಮುಂದುವರಿಸುತ್ತೇವೆ. ಹಿಂದುಳಿದ ವರ್ಗದ ನಿಗಮ ಮಂಡಳಿಗೆ ಹೆಚ್ಚಿನ ಅನುದಾನ ನೀಡಿ, 5 ಲಕ್ಷ ಜನರಿಗೆ ಪುನರ್‍ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇತ್ತೀಚೆಗೆ ಹಿಂದುಳಿದ ಮಠಗಳು ಉತ್ತಮ ಕೆಲಸ ಮಾಡುತ್ತಿವೆ. ಹಿಂದುಳಿದ ಮಠಗಳಿಗೆ 129 ಕೋಟಿ ಅನುದಾನ ಬಿಡುಗಡೆಮಾಡಿದ್ದೇವೆ ಎಂದರು.
ಸಚಿವ ಕೋಟಾ ಶ್ರಿನಿವಾಸ್ ಪೂಜಾರಿ ಮಾತನಾಡಿ, ಇಂದು ನನ್ನ ಇಲಾಖೆ ಅತ್ಯಂತ ಸಂಭ್ರಮದ ದಿನ. ದ್ವನಿ ಇಲ್ಲದವರಿಗೆ ಧ್ವನಿಯಾಗಿ, ಶೋಷಿತರ ಹಿಂದುಳಿದವರ ಬಂಧು ಅರಸು ಜನ್ಮ ದಿನ. ಅರಸು ಹೇಗೆ ಆಡಳಿತಾತ್ಮಕ ಶಕ್ತಿ ಕೊಟ್ಟರೋ ಹಾಗೆ ನಮ್ಮ ಸಿಎಂ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ವಿಶ್ವಾಸ ಇದೆ ಎಂದರು.
ಕುಂಬಾರ, ನೇಕಾರ ಸೇರಿದಂತೆ ಕುಲಕಸುಬುಗಳ ಉತ್ಪನ್ನಗಳ ಮಾರಾಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಉತ್ತರ ಕರ್ನಾಟಕ, ಮಂಗಳೂರು ಭಾಗದಲ್ಲಿ ಸೇನಾ ಪೂರ್ವ ತರಬೇತಿ ಶಾಲೆ ಆರಂಭ ಮಾಡುವುದಾಗಿ ಪ್ರಕಟಿಸಿದರು.
ಶಾಸಕ ಕುಮಾರ್ ಬಂಗಾರಪ್ಪ, ಪಿ.ರಾಜೀವ್, ಎಂಎಲ್‍ಸಿಗಳಾದ ಹೇಮಲತಾ ನಾಯಕ್, ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.

 

 

andolanait

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

42 mins ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

46 mins ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

1 hour ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

2 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

2 hours ago