ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್-೨೧ಕ್ಕೆ ಸೇರಿದ ಪಾರ್ಕ್ ಅಭಿವೃದ್ದಿ ಹಾಗೂ ಈಜುಕೊಳ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಭೂಮಿ ಪೂಜೆ ನೆರವೇರಿಸಿದರು.
ಶಾಸಕರ ವಿವೇಚನಾ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ವಿಶೇಷ ಪ್ಯಾಕೇಜ್ ಅನುದಾನದಲ್ಲಿ ೧೦ ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಈಜು ಕೊಳ ಮುಂಭಾಗದ ವಿಶಾಲವಾದ ಜಾಗವು ಅಶುಚಿತ್ವದಿಂದ ಕೂಡಿದ್ದು, ಈ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಾಸಕರು ಸ್ಥಳ ಪರಿಶೀಲಿಸಿ, ಈ ಜಾಗದಲ್ಲಿ ತಿರುಗಾಡಲು ಉತ್ತಮ ರಸ್ತೆ, ಬೋಗಾದಿ ರಸ್ತೆಗೆ ಸೇರುವಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾ ಣ, ಇಂಟರ್ ಲಾಕಿಂಗ್, ಕುಳಿತುಕೊಳ್ಳಲು ಉತ್ತಮ ಕಾಂಕ್ರೀಟ್ ಆಸನ,ಮೇಲ್ಛಾವಣಿ ಮುಂತಾದ ನವೀನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಅಂದಾಜು ಪಟ್ಟಿ ತಯಾರಿಸಿ ಅಗತ್ಯಅನುದಾನ ನೀಡಿ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು.
ಪಾಲಿಕೆ ಉಪ ಆಯುಕ್ತ ಮಹೇಶ್, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ಹೇಮಂತ್ ಕುಮಾರಗೌಡ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್, ಚಾಮರಾಜ ಕ್ಷೇತ್ರದ ಉಪಾಧ್ಯಕ್ಷ ಶಿವಕುಮಾರ್, ವಾರ್ಡ್ ಅಧ್ಯಕ್ಷ ಸೋಮಶೇಖರ ರಾಜೇ ಅರಸು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್, ಪುನೀತ್, ಬಿಎಲ್‌ಎ-೧ ದಿನೇಶ್ ಗೌಡ, ನವೀನ್, ಚಲುವ, ಗುತ್ತಿಗೆದಾರ ಅರವಿಂದ್, ಇಂಜಿನಿಯರ್ ವೇಣುಗೋಪಾಲ್, ಪಿ.ಕೆ.ಕೃಷ್ಣರಾಜು ಹಾಜರಿದ್ದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ವಿಶೇಷ ಪ್ಯಾಕೇಜ್ ಅನುದಾನದಲ್ಲಿ ವಾರ್ಡ್-೨೧ ಕ್ಕೆ ಸೇರಿದ ಪಾರ್ಕ್ ಅಭಿವೃದ್ಧಿ ಹಾಗೂ ಈಜುಕೊಳ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಭೂಮಿ ಪೂಜೆ ನೆರವೇರಿಸಿದರು.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…