ಗುಂಡುಪೇಟೆ : ತಾಲ್ಲೂಕ್ಕಿನ ಬೇಗೂರು ಸೆನ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ಪಿ ಯು ಸಿ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಮತ್ತು ತಾಂತ್ರಿಕ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಈ ದಿನ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪಿ ಎಸ್ ಐ ಅಧಿಕಾರಿ ಮಾದೇಶ್ ಅವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಬಗ್ಗೆ ಹಾಗೂ ತಾಂತ್ರಿಕ ಅಪರಾಧಗಳ ಕುರಿತು ವಿದ್ಯಾರ್ಥಿಗಳು ಅವುಗಳಿಂದ ಹೇಗೆ ಎಚ್ಚರ ಬಹಿಸಬೇಕು ಎಂಬುದರ ಅರಿವು ಮತ್ತು ಪ್ರಸ್ತುತ ದಿನಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಅವುಗಳನ್ನು ಹೇಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು.
ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶ್ರೀನಿವಾಸ್ ರಾಜು ಮಂಜುನಾಥ ಜಗದೀಶ್ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸರು ಇದ್ದರು.