Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

ತಿ.ನರಸೀಪುರ : ವೃದ್ಧನ ಮೇಲೆ ಚಿರತೆ ದಾಳಿ

ಮೈಸೂರು:  ತಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ವೃದ್ಧನ ಮೇಲೆ ಚಿರತೆ ದಾಳಿ ಮಾಡಿದೆ.
ಮಹದೇವಯ್ಯ (55)  ಎಂಬುವವರೆ  ಚಿರತೆ ದಾಳಿ ಒಳಗಾದವರು.ಕರೋಹಟ್ಟಿ ಗ್ರಾಮದ ನಿವಾಸಿಯಾದ ಮಹದೇವಯ್ಯನವರು ಮುತ್ತತ್ತಿ ಗ್ರಾಮದಲ್ಲಿರುವ ಮಗಳ ಮನೆಗೆ ಬಂದು ರಾತ್ರಿ ಜಗುಲಿ ಮೇಲೆ ಮಲಗಿದ್ದರು. ಈ ವೇಳೆ ಚಿರತೆ ದಾಳಿ ಮಾಡಿದ್ದು, ಕಾಲಿಗೆ ಕಚ್ಚಿದೆ. ಕೂಡಲೇ ಮಹದೇವಯ್ಯ ತಾವು ಹೊದ್ದುಕೊಂಡಿದ್ದ ರಗ್ಗನ್ನು ಚಿರತೆ ಮೇಲೆ ಎಸೆದು ಗಾಬರಿಯಿಂದ ಪರಾರಿಯಾಗಿದ್ದಾರೆ. ಸದ್ಯಕ್ಕೆ ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ತಾಲೂಕಿನಲ್ಲಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!