ಮೈಸೂರು: ತಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ವೃದ್ಧನ ಮೇಲೆ ಚಿರತೆ ದಾಳಿ ಮಾಡಿದೆ.
ಮಹದೇವಯ್ಯ (55) ಎಂಬುವವರೆ ಚಿರತೆ ದಾಳಿ ಒಳಗಾದವರು.ಕರೋಹಟ್ಟಿ ಗ್ರಾಮದ ನಿವಾಸಿಯಾದ ಮಹದೇವಯ್ಯನವರು ಮುತ್ತತ್ತಿ ಗ್ರಾಮದಲ್ಲಿರುವ ಮಗಳ ಮನೆಗೆ ಬಂದು ರಾತ್ರಿ ಜಗುಲಿ ಮೇಲೆ ಮಲಗಿದ್ದರು. ಈ ವೇಳೆ ಚಿರತೆ ದಾಳಿ ಮಾಡಿದ್ದು, ಕಾಲಿಗೆ ಕಚ್ಚಿದೆ. ಕೂಡಲೇ ಮಹದೇವಯ್ಯ ತಾವು ಹೊದ್ದುಕೊಂಡಿದ್ದ ರಗ್ಗನ್ನು ಚಿರತೆ ಮೇಲೆ ಎಸೆದು ಗಾಬರಿಯಿಂದ ಪರಾರಿಯಾಗಿದ್ದಾರೆ. ಸದ್ಯಕ್ಕೆ ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ತಾಲೂಕಿನಲ್ಲಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…