ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ
ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ,
ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಶುಕ್ರವಾರ ಸಂಜೆ ಸೌದೆ ತರಲು ಹೋಗಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿ ಮುಖ ಹಾಗೂ ಕತ್ತಿನ ಭಾಗವನ್ನು ಗಾಯಗೊಳಿಸಿದೆ. ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಈಗಾಗಲೇ ಎರಡು ಬಲಿ ಪಡೆದಿದ್ದ ಚಿರತೆಯನ್ನು ಉಕ್ಕಲಗೆರೆ ಬೆಟ್ಟ ಹಾಗೂ ಮುತ್ತತ್ತಿ ಬಳಿ ಸೆರೆ ಹಿಡಿದಿದ್ದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಘಟನೆ ನಡೆದಿರುವುದು ಜನರನ್ನು ಭಯಬೀಳಿಸಿದೆ,
ತಾಲ್ಲೂಕಿನ ಎಂ. ಎಲ್. ಹುಂಡಿಯ ಯುವಕ ಮಂಜುನಾಥ್, ಎಸ್. ಕೆಬ್ಬೆ ಹುಂಡಿ ಗ್ರಾಮದ ಯುವತಿ ಮೇಘನ ಚಿರತೆ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ, ಈಗ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಚಿರತೆ ದಾಳಿಗೆ 3ನೇ ಬಲಿಯಾಗಿದೆ,
ತಾಲ್ಲೂಕಿನಲ್ಲಿ ಮತ್ತೆ ಮುಂದುವರೆದ ಚಿರತೆ ಅಟ್ಟಹಾಸ.
ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಾತ್ರಿ ವೇಳೆ ಹೊರಬರಲು ಭಯ ಭೀತಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ,
ಕನ್ನನಾಯಕನಹಳ್ಳಿ ಗ್ರಾಮದ
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ಘಟನೆ ನಡೆದ ಸ್ಥಳಕ್ಕೆ ತಡವಾಗಿ ಆಗಮಿಸದ ಅಧಿಕಾರಿಗಳನ್ನು ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು,
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.
————————
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರ್ಕಾರಿಂದ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು, ಚಿರತೆ ದಾಳಿ ಬಗ್ಗೆ ಅಧಿವೇಶದಲ್ಲಿ ಚರ್ಚೆ ಮಾಡಿ, ಸರ್ಕಾರದ ಗಮನ ಸೆಳೆದಿದ್ದರು, ಸರ್ಕಾರ ತೀವ್ರ ನಿರ್ಲಕ್ಷ ವಹಿಸಿದ ಪರಿಣಾಮ ಈ ಘಟನೆ ನಡೆದಿದೆ, ಅರಣ್ಯ ಇಲಾಖೆಯವರು ಇತ್ತೀಚೆಗೆ ಎಂ ಎಲ್ ಹುಂಡಿಯಲ್ಲಿ ಸೆರೆಹಿಡಿದ ಚಿರತೆಯನ್ನು ಡಿಎನ್ಎ ಪರೀಕ್ಷೆ ಮಾಡಿದಾಗ ಮನುಷ್ಯರ ಮೇಲೆ ದಾಳಿ ಮಾಡಿದ ಚಿರತೆ ಆಗಿದೆ ಎಂದು ತಿಳಿಸಿದ್ದಾರೆ,
ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ತಾಲೂಕಿನಲ್ಲಿ ಎಲ್ಲೆಲ್ಲಿ ಚಿರತೆ ಹಾವಳಿ ಇದೆ ಎಂಬುದನ್ನು ಪರಿಶೀಲನೆ ಮಾಡಿ, ಚಿರತೆ ಸೆರೆಹಿಡಿಯುವವರೆಗೂ ಗ್ರಾಮಗಳಿಂದ ಅಧಿಕಾರಿಗಳು ತೆರಳದಂತೆ ಸೂಚನೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ,
— ಶಾಸಕ ಎಂ ಅಶ್ವಿನ್ ಕುಮಾರ್,
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…