ಜಿಲ್ಲೆಗಳು

ತಹಸಿಲ್ದಾರ್ ದರ್ಜೆಯ 71 ಅಧಿಕಾರಿಗಳಿಗೆ ಮುಂಬಡ್ತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಹಾಗೂ ಕೆ.ಜಾನ್ಸನ್, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಸೇರಿದಂತೆ ೭೧ ಮಂದಿ ತಹಸಿಲ್ದಾರ್ ಗ್ರೇಡ್ ೧ ವೃಂದದ ಅಧಿಕಾರಿಗಳಿಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಆಡಳಿತ ಸೇವೆ (ಕಿರಿಯ ಶ್ರೇಣಿ) ಹುದ್ದೆಗೆ ಸ್ಥಾನಾಪನ್ನ ಬಡ್ತಿ ನೀಡಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಅವರನ್ನು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ, ಕೆ.ಜಾನ್ಸನ್ ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ ಅವರನ್ನು ಮೈಸೂರು ಮಹಾನಗರಪಾಲಿಕೆ ವಲಯ ಆಯುಕ್ತರ ಹುದ್ದೆಗೆ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್ ಅವರನ್ನು ಜಲಾನಯನ ಇಲಾಖೆ, ಕಾವೇರಿ ಜಲಾನಯನ ಅಭಿವೃದ್ಧಿ ಮಂಡಳಿಯ ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಅವರನ್ನು ಬೆಂಗಳೂರಿನ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ರಿಜಿಸ್ಟ್ರಾರ್ ಹುದ್ದೆಗೆ ಸ್ಥಳ ನಿಯುಕ್ತಿ ಮಾಡಲಾಗಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳನ್ನು ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಉಮಾದೇವಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

9 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

11 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

11 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

11 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

11 hours ago