ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಇಡೀ ಮೈಸೂರಿನ ತುಂಬಾ ಗುಂಬಜ್‌ನಂತಹ ವಿನ್ಯಾಸಗಳು ನಗರದ ಅಂದವನ್ನು ಹೆಚ್ಚಿಸಿದ್ದು, ಪ್ರವಾಸಿಗರಿಗೆ ಪಾರಂಪರಿಕ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತವೆ. ಆದರೆ, ಇಂತಹ ವಿನ್ಯಾಸದ ಮಹತ್ವ ತಿಳಿಯದೇ ಮೈಸೂರಿನಲ್ಲಿ ವಿಕೃತಿ ತೋರುತ್ತಿರುವ ಬಿಜೆಪಿಗರು ನಿಜಕ್ಕೂ ಸಾರ್ವಜನಿಕ ಬದುಕಿನ ಜವಾಬ್ದಾರಿ ಏನು ಎಂಬುದನ್ನು ತಿಳಿಯದೇ ವರ್ತಿಸುತ್ತಿದ್ದಾರೆ.
ಭಾರತವನ್ನು ಮೊಘಲರು, ಬ್ರಿಟಿಷರು ಆಳಿದ್ದಾರೆ. ಮೌರ್ಯರು, ಡಚ್ಚರು, ಫ್ರೆಂಚರು ಮತ್ತು ಪೋರ್ಚುಗೀಸರೂ ಆಳಿದ್ದರೂ ಭಾರತ ಯಾವುದೋ ಒಂದು ಧರ್ಮದ ದೇಶವಾಗಿ ಪರಿವರ್ತನೆಯಾಗಿಲ್ಲ. ಭಾರತ ತನ್ನ ವೈವಿಧ್ಯ ತೆಗಳಿಂದ ಭಾರತವಾಗಿಯೇ ಉಳಿದಿದೆ. ಹೀಗಿದ್ದರೂ ಅಭಿವೃದ್ಧಿ ವಿಷಯಗಳನ್ನು ಮರೆ ಮಾಚಲು ಮತ್ತು ಚುನಾವಣಾ ಕಾಲದಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವ ಸಲುವಾಗಿ ಕೋಮು ರಾಜಕೀಯ ಮಾಡುತ್ತಿರುವ ಮೈಸೂರಿನ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಬೇಜವಾಬ್ದಾರಿ ನಡವಳಿಕೆಯನ್ನು ನಿಲ್ಲಿಸಿ, ಜನರ ತೆರಿಗೆ ಹಣವನ್ನು ಪೋಲು ಮಾಡಬಾರದು ಎಂದು ಈ ಮೂಲಕ ಆಗ್ರಹಿಸುತ್ತೇನೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…