ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ತಿಳಿಸಿದರು./
ದೇಶದಲ್ಲಿ 2030ರೊಳಗೆ ಎಚ್ ಐವಿ ಏಡ್ಸ್ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಲವಾರು ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ, ಸಮುದಾಯ ಆಧಾರಿತ ತಪಾಸಣೆಯಿಂದ ಅಪಾಯದಲ್ಲಿರುವ ಜನಸಂಖ್ಯೆಯಲ್ಲಿ ಎಚ್ ಐವಿ ತಡೆಗಟ್ಟಿವಿಕೆ ಆರೈಕೆ ಮತ್ತು ಸೇವೆಗಳ ಪಡೆಯುವಿಕೆಯನ್ನು ಸುಧಾರಿಸಲು ಸಮುದಾಯ ಆಧಾರಿತ ಉಚಿತ ಎಚ್ ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆಯನ್ನು ಮಾಡಲಾಗುತ್ತಿದೆ ,ಸಮುದಾಯ ಆಧಾರಿತ ತಪಾಸಣೆಯನ್ನು ಜನನಿಬಿಡ ಗುಡ್ಡಗಾಡು ಜಾತ್ರೆ ಸಂತೆ ನಡೆಯುವ ಸ್ಥಳಗಳಲ್ಲಿ ಸೇರುವ ಜನರಿಗೆ ಆರೋಗ್ಯ ಅರಿವು ಮುಡಿಸುವುದರ ಮೂಲಕ ಆರೋಗ್ಯ ತಪಾಸಣಾ ಶಿಬಿರ ನಡೆಸುವುದು ಸಾಮಾನ್ಯ ಇಂತಹ ಶಿಬಿರಗಳನ್ನು ಆರೋಗ್ಯ ಶಿಕ್ಷಣ ಮತ್ತು ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದ ಸಂಯೋಜನೆಯೊಂದಿಗೆ ಆರೋಗ್ಯ ಶಿಬಿರ ಏರ್ಪಡಿಸುವುದರ ಮೂಲಕ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.
ಹೆಚ್ ಐವಿ ಪರೀಕ್ಷೆ ಮಾಡಿಸಿ : ಹೆಚ್ ಐವಿ ಪರೀಕ್ಷೆಗೊಳಗಾದ ವರು ಹೆಚ್ ಐವಿ ಸೋಂಕು ಇಲ್ಲ ಎಂದು ತಿಳಿದುಕೊಂಡ ಜನರು ಲೈಂಗಿಕತೆ, ಮಾದಕವಸ್ತು ಬಳಕೆ ಮತ್ತು ಆರೋಗ್ಯ ರಕ್ಷಣೆ ಬಗ್ಗೆ ಮುಂಜಾಗ್ರತೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಇದರಿಂದ ಹೆಚ್ ಐವಿ ತಡೆಯಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪುಷ್ಪರಾಣಿ,ಆಸ್ಪತ್ರೆ ಸಿಬ್ಬಂದಿ ವರ್ಗ ಹಾಗೂ ಸಮುದಾಯ ಆಧಾರಿತ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಹಾಜರಿದ್ದರು
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…