ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಪ್ರಕರಣಗಳಲ್ಲಿ ೧೮,೧೬,೫೦೦ ರೂ. ಬೆಲೆ ಬಾಳುವ ಸುಮಾರು ೩೦೫ ಗ್ರಾಂ ತೂಕದ ಚಿನ್ನಾಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಪಲ್ಸರ್ ದ್ವಿಚಕ್ರ ವಾಹನ ಹಾಗೂ ಒಂದು ಬೊಲೆರೋ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಪಿ ಎಂ.ಎಸ್.ಗೀತಾ ಅವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಇ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆ ಮತ್ತು ಅಶೋಕಪುರಂ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಸಬ್ ಇನ್‌ಸ್ಪೆಕ್ಟರ್ ಎಂ.ಕೆ.ಸ್ಮಿತಾ ಹಾಗೂ ಸಿಬ್ಬಂದಿಗಳಾದ ಪಿ.ಜೆ.ರಾಜು, ನಾರಾಯಣಶೆಟ್ಟಿ, ಎಚ್.ಜೆ.ಲೋಕೇಶ್, ಗಿರೀಶ್, ಮಹದೇವಯ್ಯ, ಬಸವರಾಜ ಮುನ್ಯಾಳ್, ಮಹೇಶ ಹಾಗೂ ಕೆ.ಆರ್.ವಿಭಾಗದ ಎಸಿಪಿ ಸ್ಕ್ವಾಡ್ ಸಿಬ್ಬಂದಿಗಳಾದ ಮೋಹನ್ ಕುಮಾರ್, ಸಾಗರ್, ಸುರೇಶ, ಹರೀಶ, ಮೇಘಾನಾಯಕ್, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಹರೀಶ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…