ಜಿಲ್ಲೆಗಳು

ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧನ

ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣಗಳಲ್ಲಿ ೧೮,೧೬,೫೦೦ ರೂ. ಬೆಲೆ ಬಾಳುವ ಸುಮಾರು ೩೦೫ ಗ್ರಾಂ ತೂಕದ ಚಿನ್ನಾಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಪಲ್ಸರ್ ದ್ವಿಚಕ್ರ ವಾಹನ ಹಾಗೂ ಒಂದು ಬೊಲೆರೋ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಡಿಸಿಪಿ ಎಂ.ಎಸ್.ಗೀತಾ ಅವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಇ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆ ಮತ್ತು ಅಶೋಕಪುರಂ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಸಬ್ ಇನ್‌ಸ್ಪೆಕ್ಟರ್ ಎಂ.ಕೆ.ಸ್ಮಿತಾ ಹಾಗೂ ಸಿಬ್ಬಂದಿಗಳಾದ ಪಿ.ಜೆ.ರಾಜು, ನಾರಾಯಣಶೆಟ್ಟಿ, ಎಚ್.ಜೆ.ಲೋಕೇಶ್, ಗಿರೀಶ್, ಮಹದೇವಯ್ಯ, ಬಸವರಾಜ ಮುನ್ಯಾಳ್, ಮಹೇಶ ಹಾಗೂ ಕೆ.ಆರ್.ವಿಭಾಗದ ಎಸಿಪಿ ಸ್ಕ್ವಾಡ್ ಸಿಬ್ಬಂದಿಗಳಾದ ಮೋಹನ್ ಕುಮಾರ್, ಸಾಗರ್, ಸುರೇಶ, ಹರೀಶ, ಮೇಘಾನಾಯಕ್, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಹರೀಶ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

11 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

12 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago