ಹನೂರು : ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ ಆದ್ದರಿಂದ ಈ ಬಾರಿ ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮನವಿ ಮಾಡಿದರು.
ತಾಲೂಕಿನ ಹಲಗಾಪುರ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ನಾಮಫಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ತಮ್ಮ ಪ್ರಣಾಳಿಕೆಯಲ್ಲಿ ನರೇಂದ್ರ ಮೋದಿ ರವರು ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಉದ್ಯೋಗ ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ. ಇದಲ್ಲದೆ ಕಾಂಗ್ರೆಸ್ ಸರ್ಕಾರದಲ್ಲಿಯೂ ಸಹ ಯುವಕರಿಗೆ ಉದ್ಯೋಗ ಕಲ್ಪಿಸಿ ಕೊಟ್ಟಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಜನತಾ ಜಲಧಾರೆ ಹಾಗೂ ಪಂಚರತ್ನ ಕಾರ್ಯಕ್ರಮಗಳಲ್ಲಿ ಅಪಾರ ಪ್ರಮಾಣದ ಜನಸ್ತೋಮ ಭಾಗವಹಿಸಿ ಜಾದಳವನ್ನು ಬೆಂಬಲಿಸುತ್ತಿರುವುದರಿಂದ ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಕಳೆದ ಚುನಾವಣೆಯಲ್ಲಿ ನಾನು ಪರಾಭವಗೊಂಡರು ಸಹ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗಿಲ್ಲ, ಇದುವರೆಗೂ ನಿಮ್ಮ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ ಮುಂದೆಯೂ ಸಹ ನನ್ನ ಕೈಲಾದ ಸೇವೆಮಾಡುತ್ತೇನೆ, ಈ ಬಾರಿ ಕ್ಷೇತ್ರದ ಮತದಾರರು ನನಗೂ ಒಂದು ಅವಕಾಶ ಮಾಡಿಕೊಟ್ಟರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಶಾಗ್ಯ ರವಿ, ಮಂಜೇಶ್ ಸೇರಿದಂತೆ ಹಲಗಾಪುರ ಗ್ರಾಮದ ಮುಖಂಡರುಗಳು, ಯುವಕರು ಹಾಜರಿದ್ದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…