ಜಿಲ್ಲೆಗಳು

ಪ್ರಾದೇಶಿಕ ಪಕ್ಷ ಬೆಂಬಲಕ್ಕಾಗಿ ತೆನೆ ಅಭ್ಯರ್ಥಿ ಮನವಿ

ಹನೂರು : ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ ಆದ್ದರಿಂದ ಈ ಬಾರಿ ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮನವಿ ಮಾಡಿದರು.

ತಾಲೂಕಿನ ಹಲಗಾಪುರ ಗ್ರಾಮದಲ್ಲಿ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ನಾಮಫಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ತಮ್ಮ ಪ್ರಣಾಳಿಕೆಯಲ್ಲಿ ನರೇಂದ್ರ ಮೋದಿ ರವರು ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಉದ್ಯೋಗ ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ. ಇದಲ್ಲದೆ ಕಾಂಗ್ರೆಸ್ ಸರ್ಕಾರದಲ್ಲಿಯೂ ಸಹ ಯುವಕರಿಗೆ ಉದ್ಯೋಗ ಕಲ್ಪಿಸಿ ಕೊಟ್ಟಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಜನತಾ ಜಲಧಾರೆ ಹಾಗೂ ಪಂಚರತ್ನ ಕಾರ್ಯಕ್ರಮಗಳಲ್ಲಿ ಅಪಾರ ಪ್ರಮಾಣದ ಜನಸ್ತೋಮ ಭಾಗವಹಿಸಿ ಜಾದಳವನ್ನು ಬೆಂಬಲಿಸುತ್ತಿರುವುದರಿಂದ ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಕಳೆದ ಚುನಾವಣೆಯಲ್ಲಿ ನಾನು ಪರಾಭವಗೊಂಡರು ಸಹ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗಿಲ್ಲ, ಇದುವರೆಗೂ ನಿಮ್ಮ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ ಮುಂದೆಯೂ ಸಹ ನನ್ನ ಕೈಲಾದ ಸೇವೆಮಾಡುತ್ತೇನೆ, ಈ ಬಾರಿ ಕ್ಷೇತ್ರದ ಮತದಾರರು ನನಗೂ ಒಂದು ಅವಕಾಶ ಮಾಡಿಕೊಟ್ಟರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಶಾಗ್ಯ ರವಿ, ಮಂಜೇಶ್ ಸೇರಿದಂತೆ ಹಲಗಾಪುರ ಗ್ರಾಮದ ಮುಖಂಡರುಗಳು, ಯುವಕರು ಹಾಜರಿದ್ದರು.

andolanait

Recent Posts

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

5 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

11 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

16 mins ago

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

23 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

23 hours ago