ಜಿಲ್ಲೆಗಳು

ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ

ಮೈಸೂರು: ಪೌರ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸುವ ಉದ್ದೇಶದಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ರಾಜೇಂದ್ರ ಅವರು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಪೌರ ಕಾರ್ಮಿಕ ಮುಖಂಡರು, ಪೌರ ಕಾರ್ಮಿಕರ ನೇಮಕಾತಿ ವೇಳೆ ರೋಸ್ಟರ್ ಪದ್ದತಿಯನ್ನು ರದ್ದು ಮಾಡಬೇಕು. ೭೦೦ ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಹುದ್ದೆಗೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಮೈಸೂರಿನ ಜನಸಂಖ್ಯೆ ೧೦ ಲಕ್ಷವನ್ನು ದಾಟಿದ್ದು, ಹಾಲಿ ಇರುವ ಪೌರ ಕಾರ್ಮಿಕರಿಗೆ ಹೆಚ್ಚಿನ ಹೊರೆಯಾಗುತ್ತಿದೆ. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ನೇಮಕಾತಿ ನಡೆಯಬೇಕು. ಸೇವೆಯಲ್ಲಿರುವ ಪೌರಕಾರ್ಮಿಕರು ಮೃತರಾದಲ್ಲಿ ಅವರಿಗೆ ೧೦ ಲಕ್ಷ ರೂ. ಪರಿಹಾರ ಹಾಗೂ ಅವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಹೇಳಿದರು.

ನಗರಪಾಲಿಕೆಗೆ ಸೇರಿದ ಮಳಲವಾಡಿ ಗ್ರಾಮದಲ್ಲಿ ೧೫೮ ಮಂದಿ ಪೌರ ಕಾರ್ಮಿಕರಿಗೆ ಜಿ ಪ್ಲಸ್ ಮಾದರಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಬೇಕು. ಮನೆಮನೆ ಕಸ ಸಂಗ್ರಹಿಸುವ ಕೆಲಸದಲ್ಲಿರುವ ೨೫೦ಕ್ಕೂ ಹೆಚ್ಚು ನೌಕರರನ್ನು ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.

ದಿನನಿತ್ಯ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಗುರುತಿನ ಚೀಟಿ, ಇಎಸ್‌ಐ, ಪಿಎಫ್, ಬೆಳಗಿನ ಉಪಹಾರ, ಸಂಕಷ್ಟ ಭತ್ಯೆ ನೀಡಬೇಕು. ಅಭಯ ವಾಹನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೧೨ ಮಂದಿ ಚಾಲಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.ಕಡಕೊಳ ಪಟ್ಟಣ ಪಂಚಾಯ್ತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಪೌರ ಕಾರ್ಮಿಕರನ್ನು ನೇಕಮ ಮಾಡಿಲ್ಲ. ಇದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವವರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪೌರ ಕಾರ್ಮಿಕರ ಸಮಸ್ಯೆಗಳನ್ನು ಸಮಾಧಾನದಿಂದಲೇ ಆಲಿಸಿದ ಜಿಲಾಧಿಕಾರಿ ಕೆ.ವಿ.ರಾಜೇಂದ್ರ ಅವರು, ಪೌರಕಾರ್ಮಿಕರ ಅಗತ್ಯತೆಗಳನ್ನು ಪೂರೈಸಲು ಸರ್ಕಾರ ಬದ್ದವಿದೆ. ಈ ಸಂಬಂದ ಅಧಿಕಾರಿಗಳು ಅವರ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ವಿವಿರವನ್ನು ಒದಗಿಸಬೇಕು ಎಂದು ಹೇಳಿದರು.

ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ಕಾರ್ಯಾಧ್ಯಕ್ಷ ಮಂಚಯ್ಯ, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್, ಉಪಾಧ್ಯಕ್ಷ ಜಿ.ಎನ್.ಚಾಮ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

andolana

Recent Posts

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

8 mins ago

ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್:‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

19 mins ago

ಅಪಘಾತದಲ್ಲಿ ಗಾಯಗೊಂಡವನಿಂದ 80 ಸಾವಿರ ದೋಚಿದ್ದ ಇಬ್ಬರು ಅರೆಸ್ಟ್‌

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ…

34 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

1 hour ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

1 hour ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

2 hours ago