ಜಿಲ್ಲೆಗಳು

ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ… ಮಂಡ್ಯದಲ್ಲಿ ರೈತ ಸಂಘ ಪ್ರತಿಭಟನೆ

ಚಳಿ ಮಳೆ ಬಿಸಿಲೆನ್ನದೆ ೧೭ನೇ ದಿನದಲ್ಲಿ ಮುಂದುವರೆದ ರೈತರ ಧರಣಿ

ಹೇಮಂತ್‌ಕುಮಾರ್

ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ವತಿಯಿಂದ ಕಬ್ಬಿಗೆ ಹಾಗೂ ಹಾಲಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ೧೭ನೇ ದಿನಕ್ಕೆ ಕಾಲಿರಿಸಿದೆ.

ಆದರೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚವ ಕೆ.ಗೋಪಾಲಯ್ಯ ಅವರು ಧರಣಿ ನಿರತರನ್ನು ಭೇಟಿ ಮಾಡಿ ಮಾತನಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಬೇಕೆಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತಸಂಘಟನೆ ಕಾರ್ಯಕರ್ತರು ನಡೆಸಿದ ಧರಣಿ ೪೬ ದಿನಗಳ ಕಾಲ ನಡೆದಿತ್ತು. ಕೊನೆಗೆ ಮುಖ್ಯಮಂತ್ರಿಗಳೇ ಧರಣಿ ಸ್ಥಳಕ್ಕೆ ಆಗಮಿಸಿ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಆರಂಭಿಸುವುದಾಗಿ ಹೇಳಿ ಧರಣಿ ಅಂತ್ಯಗೊಳಿಸಿದ್ದರು.

ಬಳಿಕ ಅವರು ಮಾತುಕೊಟ್ಟಂತೆಯೇ ಬಜೆಟ್‌ನಲ್ಲಿ ಮೈಶುಗರ್ ಕಾರ್ಖಾನೆಗೆ ೫೦ ಕೋಟಿ ರೂ. ಅನುದಾನ ಒದಗಿಸಿ ಸರ್ಕಾರಿ ಸ್ವಾಮ್ಯದಲ್ಲಿಯೇ ಕಾರ್ಖಾನೆ ಆರಂಭಿಸಿ ಕೊಟ್ಟ ಮಾತಿನಂತೆಯೇ ನಡೆದುಕೊಂಡಿದ್ದರು. ಇದು ರೈತರ ಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯ ರೈತಸಂಘಟನೆ ಎಸ್.ಸಿ.ಮಧುಚಂದನ್ ನೇತೃತ್ವದಲ್ಲಿ ಟನ್ ಕಬ್ಬಿಗೆ ೪೫೦೦ ರೂ. ನೀಡಬೇಕು ಮತ್ತು ಲೀಟರ್ ಹಾಲಿಗೆ ೪೦ ರೂ. ಘೋಷಣೆ ಮಾಡಬೇಕೆಂದು ಆರಂಭಿಸಿರುವ ಅಹೋರಾತ್ರಿ ಧರಣಿ ೧೭ನೇ ದಿನದಲ್ಲಿ ನಡೆದಿದೆ.

ಇದುವರೆಗೆ ಸಚಿವ ಕೆ.ಸಿ.ನಾರಾಯಣಗೌಡ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದೆ ಸುಮಲತಾ, ವಿಧಾನಪರಿಷತ್ ಸದಸ್ಯರಾದ ದಿನೇಶ್‌ಗೂಳಿಗೌಡ, ಮಧು ಜಿ.ಮಾದೇಗೌಡ, ಜಿಲ್ಲಾಧಿಕಾರಿ ಗೊಪಾಲಕೃಷ್ಣ, ಜಾ.ದಳ ಮುಖಂಡರಾದ ಎಚ್.ಎನ್.ಯೋಗೇಶ್, ವಕ್ತಾರರಾದ ಮಹಾಲಿಂಗೇಗೌಡ ಮುದ್ದನಘಟ್ಟ ಸೇರಿದಂತೆ ಅನೇಕ ಗಣ್ಯರು ಧರಣಿ ನಿರತರನ್ನು ಭೇಟಿಯಾಗಿ ಮನವಿ ಆಲಿಸಿದ್ದಾರೆ.

ಇಷ್ಟಾದರೂ ಜಿಲ್ಲೆಯ ಉಸ್ತುವಾರಿ ಹೊಣೆ ಹೊತ್ತ ಕೆ.ಗೋಪಾಲಯ್ಯ ಸ್ಥಳಕ್ಕೆ ಬಂದು ಮನವಿ ಆಲಿಸಲಿಲ್ಲ ಎಂಬ ಸಿಟ್ಟು ಪ್ರತಿಭಟನಾ ನಿರತರಲ್ಲಿ ಮಡುಗಟ್ಟಿದೆ. ಹಾಗಾಗಿ ಇದೀಗ ಧರಣಿ ಸ್ಥಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂಬ ಫ್ಲೆಕ್ಸ್ ಅಳವಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಂಡವಪುರ ತಾಲ್ಲೂಕು ರೈತಸಂಘದ ಕಾರ್ಯಕರ್ತರು ಸುನಿತಾಪುಟ್ಟಣ್ಣಯ್ಯ ನೇತೃತ್ವದಲ್ಲಿ ಪಾಲ್ಗೊಂಡು ಹೋರಾಟ ಬೆಂಬಲಿಸಿ, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಕೃಷಿಯನ್ನು ತ್ಯಜಿಸಿ ಎಲ್ಲರೂ ಕೂಡ ಕೆಲಸಕ್ಕಾಗಿ ಬೆಂಗಳೂರಿನAತಹ ಮಹಾನಗರಗಳಿಗೆ ಹೋಗುತ್ತಿದ್ದಾರೆ. ಇದರಿಂದಾಗಿ ಹಳ್ಳಿಗಳು ವೃದ್ಧರಿಂದ ಕೂಡಿದ್ದು, ಕೃಷಿಯನ್ನು ಮಾಡುವವರೇ ಇಲ್ಲದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆಟೋ, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ವೇದಿಕೆ ಹಾಗೂ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ಅಹೋರಾತ್ರಿ ಧರಣಿಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ನಿರ್ಲಕ್ಷö್ಯದ ವಿರುದ್ಧ ಘೋಷಣೆ ಕೂಗಿದರು.

ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ಕಳೆದ ೧೭ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಸರ್ಕಾರದ ಪ್ರತಿನಿಧಿಯಾಗಲಿ ಧರಣಿ ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಕೇಳಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸಿ, ಸರ್ಕಾರಕ್ಕೆ ತಿಳಿಸಬೇಕು. ಅಲ್ಲದೆ, ಸಭೆಗೆ ದಿನಾಂಕ ನಿಗದಿಪಡಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಧರಣಿಯು ಉಗ್ರರೂಪ ತಳೆಯಲಿದೆ ಎಂದು ಎಚ್ಚರಿಸಿದ್ದಾರೆ.

ಜನವಾದಿ ಮಹಿಳಾ ಸಂಘಟನೆಯ ಸುಶೀಲ, ಲತಾ, ಶೋಭಾ, ರಾಣಿ, ಮಂಜುಳಾ, ಆಟೋ ಚಾಲಕರಾದ ಟಿ.ಕೃಷ್ಣ, ರವೀಂದ್ರ, ಸತ್ಯನಾರಾಯಣ, ರಾಜು, ನಾರಾಯಣ, ನವಾಬ್‌ಜಾನ್, ಮಹೇಶ್, ಗುರುಶಂಕರ್, ಜಯಶಂಕರ್, ಶಿವ, ನಾಗೇಂದ್ರ, ಮತ್ತು ಪಾಲ್ಗೊಂಡಿದ್ದರು.

ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ವತಿಯಿಂದ ಕಬ್ಬಿಗೆ ಹಾಗೂ ಹಾಲಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ೧೭ನೇ ದಿನಕ್ಕೆ ಕಾಲಿರಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

andolana

Recent Posts

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

46 mins ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

2 hours ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

2 hours ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

2 hours ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

3 hours ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

4 hours ago