Mysore
28
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ

ಪಾಂಡವಪುರ: ಕುಡಿದ ಅಮಲಿನಲ್ಲಿ ಪತಿಯೇ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಅರಳಕುಪ್ಪೆ ಗ್ರಾಮದ ಬೋರಲಿಂಗೇಗೌಡರ ಪುತ್ರ ಮನೋಹರ್ ಎಂಬಾತನೇ ಪತ್ನಿ ಶೋಭಾ (42) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಮದ್ಯ ಸೇವನೆಯ ದುಶ್ಚಟಕ್ಕೆ ಒಳಗಾಗಿದ್ದ ಮನೋಹರ್ ನಿತ್ಯ ಕುಡಿದು ಪತ್ನಿಯ ಮೇಲೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು, ಎಂದಿನಂತೆ ಮಂಗಳವಾರ ರಾತ್ರಿ ಕುಡಿದು ಮನೆಗೆ ಬಂದ ಮನೋಹರ ಪತ್ನಿ ಶೋಭಾ ಅವರ ಮೇಲೆ ಗಲಾಟೆ ಆರಂಭಿಸಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಮನೋಹರ ಪತ್ನಿ ಶೋಭಾಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ಶೋಭಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪತ್ನಿ ಸಾವನ್ನಪ್ಪುತ್ತಿದ್ದಂತೆಯೇ ಪತಿ ಮನೋಹರ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದ ಅಕ್ಕಪಕ್ಕದ ಮನೆಯವರು ಸ್ಥಳಕ್ಕಾಗಮಿಸಿ ವಿಷಯವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಮೃತ ಶೋಭಾ ಅವರಿಗೆ ಅನುಶ್ರೀ ಹಾಗೂ ಅವಿನಾಶ್ ಎಂಬ ಮಕ್ಕಳಿದ್ದಾರೆ. ಘಟನೆ ಸಂಬಂಧ ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!