ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ
ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಇರಿಸಲಾಗಿದ್ದ ಕೋಳಿಯನ್ನು ತಿನ್ನಲು ಬಂದ ಚಿರತೆ ರಾತ್ರಿ ಎಂಟು ಗಂಟೆ ವೇಳೆಗೆ ಸೆರೆಯಾಗಿದೆ.
ಕಳೆದ 20 ದಿನಗಳಿಂದಲೂ ಗ್ರಾಮದಲ್ಲಿ ಚಿರತೆ ಓಡಾಡುತ್ತಿತ್ತು. ಈ ಸಂಬಂಧ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿತ್ತು.
ಬೋನಿನೊಳಗೆ ಮತ್ತೊಂದು ಕಂಪಾರ್ಟ್ ಮೆಂಟಿನಲ್ಲಿ ಕೋಳಿಯನ್ನು ಕಟ್ಟಿ ಚಿರತೆ ಬೇಟೆಗೆ ಬಲೆ ಬೀಸಲಾಗಿತ್ತು. ಬುಧವಾರ ರಾತ್ರಿ 8 ರ ಸಮಯದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಬೋನಿನೊಳಗೆ ಬಂಧಿಯಾಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಚಿರತೆಯನ್ನು ರಕ್ಷಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅರಣ್ಯಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಸೆರೆ ಸಿಕ್ಕ ಚಿರತೆಗೆ ಕಾಲರ್ ಐಡಿ ಅಳವಡಿಸಿ ಮತ್ತೆ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದ್ದು ಚಿರತೆ ಚಲನ ವಲನಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಮತ್ತು ಈ ಭಾಗದಲ್ಲಿ ಎಷ್ಟು ಚಿರತೆಗಳಿವೆ ಎಂದು ಪತ್ತೆ ಹಚ್ಚಲು ಇದು ನೆರವಾಗಲಿದೆ.
ಕಳೆದ ಎರಡು ತಿಂಗಳಿನಿಂದ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ವಿಪರೀತವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ನಿನ್ನೆಯಷ್ಟೇ ಬನ್ನೂರು ಗೊರವನಹಳ್ಳಿಯಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿತ್ತು. ಡಿ. ಮೂರರಂದು ಬನ್ನೂರಿನ ಬಸವನಹಳ್ಳಿಯ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆದರೆ ಅದರ ತಾಯಿಯನ್ನು ಸೆರೆ ಹಿಡಿಯುವ ಪ್ರಯತ್ನ ಇನ್ನೂ ಸಫಲವಾಗಿಲ್ಲ
ಕಳೆದ ಎರಡು ತಿಂಗಳಿಂದಲೂ ಬೋನುಗಳನ್ನು ಅಳವಡಿಸಿ ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿದೆ. ಆದರೆ ಇದುವರೆಗೆ ಮೂರು ಮರಿ ಚಿರತೆಗಳು ಮತ್ತು ಒಂದು ಚಿರತೆಯಷ್ಟೇ ಸೆರೆ ಸಿಕ್ಕಿವೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…