ಜಿಲ್ಲೆಗಳು

ಕುರಿ ತಿನ್ನಲು ಬಂದ ಚಿರತೆ ಕೊನೆಗೂ ಬೋನಿಗೆ ಬಿತ್ತು…

ಮದ್ದೂರು: ಹಳೇ ಮೈಸೂರು ಭಾಗದಲ್ಲಿ ಚಿರತೆಗಳ ಉಪಟಳ ಮುಂದುವರಿದಿದೆ. ಮದ್ದೂರು ತಾಲೂಕಿನ ಕುಂದನಕುಪ್ಪೆಯಲ್ಲಿ ಭಾನುವಾರ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಸೆರೆ ಹಿಡಿಯಲಾಗಿದೆ.

ಕುಣಿಗಲ್‌ ತಾಲ್ಲೂಕಿಗೆ ಹೊಂದಿಕೊಂಡಿರುವ ಮದ್ದೂರಿನ ಕೊನೆಯ ಗ್ರಾಮವಾದ ಕುಂದನಕುಪ್ಪೆ ಕೃಷ್ಣೇಗೌಡರ ಕುರಿ ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ ನುಗ್ಗಿತ್ತು. ಬೆಳಿಗ್ಗೆ ಕುರಿ ಕೊಟ್ಟಿಗೆ ಒಳಗೆ ಚಿರತೆಯನ್ನು ಕಂಡ ಕೃಷ್ಣೇಗೌಡರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಕಾರ್ಯಾಚರಣೆ ಆರಂಭಿಸಿದ್ದರು.

ಸುಮಾರು ಐದು ಗಂಟೆಗಳ ಕಾರ್ಯಾಚರಣೆ ನಂತರವೂ ಬೋನಿಗೆ ಬೀಳದಿದ್ದಾಗ ತಜ್ಞರನ್ನು ಕರೆಸಿ ಅರಿವಳಿಕೆ ಇಂಜೆಕ್ಷನ್‌ ಪ್ರಯೋಗಿಸಿ ಚಿರತೆಯನ್ನು ಸೆರೆ ಹಿಡಿಯಲಾಯಿತು. ಚಿರತೆ ಹಾವಳಿಯಿಂದ ಬೇಸತ್ತಿದ್ದ ಜನತೆ ಈಗ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ.

ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ಮೂರು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು. ಹೊಸದಾಗಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ರೈತರು ಹಗಲು ವೇಳೆ ಕೂಡ ಒಬ್ಬೊಬ್ಬರೇ ತಮ್ಮ ಹೊಲಗದ್ದೆಗಳಿಗೆ ಹೋಗಲು ಹೆದರಿಕೊಳ್ಳುವಂತಾಗಿತ್ತು. ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುತ್ತಿದ್ದರು. ಚಿರತೆಯನ್ನು ಹಿಡಿದು ಈ ಭಾಗದ ಜನರ ಭೀತಿ ದೂರ ಮಾಡಿರುವ ಅರಣ್ಯ ಇಲಾಖೆಗೆ ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ.

andolana

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

31 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

32 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

34 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

47 mins ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago