ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮಹಿಳೆಯರ ಮೃತದೇಹದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24)ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಮಡಿಕೇರಿಯ ವೃದ್ದೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿ ಪರಾರಿಯಾಗಿದ್ದ ಸೈಯದ್ ತನ್ನ ಪೋನ್ ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಆತನ ಫೋನ್ ಪರಿಶೀಲಿಸಿದಾಗ ಶವಾಗಾರದಲ್ಲಿದ್ದ ಮಹಿಳೆಯರ ಶವಗಳ ಫೋಟೋ ಪತ್ತೆಯಾಗಿತ್ತು.
ಈ ಬಗ್ಗೆ ತನಿಖೆ ಆರಂಭಿಸಿದ್ದ ಮಡಿಕೇರಿ ನಗರ ಪೊಲೀಸರು ಆರೋಪಿ ವಿರುದ್ಧ ಮಾನಭಂಗ ಪ್ರಕರಣ ದಾಖಲಿಸಿ, ಹುಡುಕಾಟ ಆರಂಭಿಸಿದ್ದರು.
ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದ. ಸೆಪ್ಟೆಂಬರ್ 22ರಂದು ರಾತ್ರಿ ಸುಮಾರು11 ಗಂಟೆಗೆ 74 ವರ್ಷದ ವೃದ್ಧೆಯ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆದಾಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿತ್ತು.
ಪರಾರಿಯಾಗುವ ಸಂದರ್ಭದಲ್ಲಿ ಸೈಯದ್ ತನ್ನ ಫೋನನ್ನು ಮನೆಯಲ್ಲೇ ಬಿಟ್ಟು ಹೋಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಮೊಬೈಲ್ ಘೋನನ್ನು ಪರಿಶೀಲಿಸುವ ವೇಳೆ ಆರೋಪಿ ಸೈಯದ್ ಮೃತ ಮಹಿಳೆಯರ ಚಿತ್ರ ತೆಗೆದಿರುವುದು ಬೆಳಕಿಗೆ ಬಂದಿತ್ತು. ಇದೀಗ ಸೈಯದ್ ನನ್ನು ಮಡಿಕೇರಿ ನಗರ ಠಾಣೆ ಪೊಲೀಸರು ಬಂಧಿಸಿ ಸೆಕ್ಷನ್ 445 ಹಾಗೂ 354ರಡಿ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯ ಆರೋಪಿ ಸೈಯದ್ಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆಸ್ಪತ್ರೆಯಲ್ಲಿ ಕರ್ತವ್ಯನಿರತ ಮಹಿಳೆಯರನ್ನೂ ಸೈಯದ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಗಳಿದ್ದು ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…