ಮೈಸೂರು; ೬೭ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಗೀತೆಗಳನ್ನು ಹಾಡಿದರು. ಅರಮನೆಯ ಮೈದಾನದಲ್ಲಿ ಕನ್ನಡದ ಗೀತೆ ಮೊಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮಕ್ಕೆಮೆರಗು ತಂದರು. ಮೊದಲಿಗೆ ಕುವೆಂಪು ವಿರಚಿತ ಜಯಭಾರತ ಜನನಿಯ ತನುಜಾತೆ ಗೀತೆ ಹಾಡುವ ಮೂಲಕ ಕನ್ನಡದ ಕಂಪನ್ನು ಹರಿಸಿದರು
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಹಾಪೌರ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ,ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಕುಲಸಚಿವ ಪ್ರೊ.ಆರ್.ಶಿವಪ್ಪ ಮೊದಲಾದವರು ಪಾಲ್ಗೊಂಡು ಕನ್ನಡ ಗೀತೆಗಳನ್ನು ಹಾಡಿದರು.



