ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.
ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.
ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.
ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.
ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…