ಸಿದ್ದಾಪುರ: ಇಲ್ಲಿಗೆ ಸಮೀಪದ ಬಾಡಗ ಬಾಣಂಗಾಲದಲ್ಲಿ ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಲ್ಲಿನ ನಿವಾಸಿ ಗಾರೆ ಕೆಲಸಗಾರ ವಿಜು ಮುಂಜಾನೆ ಕೆಲಸಕ್ಕೆ ತೆರುಳುವ ಸಂದರ್ಭದಲ್ಲಿ ಅಟಾತನೆ ಆನೆ ಎದುರಾಗಿದೆ.ತಕ್ಷಣ ಹೆಚ್ಚೆತ್ತುಕೊಂಡ ಕಾರ್ಮಿಕ ಗಾಡಿಯನ್ನು ಬಿಟ್ಟು ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಭಯದಲ್ಲೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೂಡಲೇ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಹಟ್ಟಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.