ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ದೊರಕದ ಗೃಹಭಾಗ್ಯ: ಒಂದು ವಾರದ ಗಡುವು ನೀಡಿದ ಸಂತ್ರಸ್ತರು
ಮಡಿಕೇರಿ: ೨೦೧೮ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಮನೆ ಹಸ್ತಾಂತರಿಸದ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ೨೦೧೮ರಿಂದ ಸತತ ಮೂರು ವರ್ಷಗಳ ಕಾಲ ಪ್ರಕೃತಿ ವಿಕೋಪ ಸಂಭವಿಸಿದೆ. ಪ್ರಾಕೃತಿಕ ವಿಕೋಪದಿಂದ ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ಅದರಲ್ಲೂ ೨೦೧೮ರಲ್ಲಿ ಮಡಿಕೇರಿ ತಾಲ್ಲೂಕಿನ ಹೆಮ್ಮೆತ್ತಾಳು, ಮೇಘತ್ತಾಳು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಸೂರ್ಲಬ್ಬಿ ವ್ಯಾಪಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಉಂಟಾಗಿತ್ತು. ಇಲ್ಲಿನ ಎಲ್ಲಾ ಸಂತ್ರಸ್ತರಿಗೆ ಸೂರು ಕಲ್ಪಿಸಲು ಇನ್ನೂ ಸಾಧ್ಯವಾಗಿಲ್ಲ.





