ಜಿಲ್ಲೆಗಳು

ಕಾಮಗೆರೆ ಆಸ್ಪತ್ರೆಗೆ ವೈದ್ಯರೇ ಇಲ್ಲ !

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ

ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಕಾಮಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬಡವರಂತೂ ಹೆಚ್ಚು ಹಣ ನೀಡಲೂ ಆಗದೇ, ಸೂಕ್ತ ಸೌಲಭ್ಯವೂ ದೊರಕದೇ ಕಷ್ಟ ಅನುಭವಿಸುತ್ತಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿದ್ದರೂ ಹನೂರು ವಿಧಾನಸಭಾ ಕ್ಷೇತ್ರದಡಿ ಬರುವ ಅತಿ ದೊಡ್ಡ ಊರು ಕಾಮಗೆರೆಗೆ1962 ರಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಯಿತು. ಈಗಂತೂ 10 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸೌಲಭ್ಯವನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಇಲ್ಲಿ ಇಬ್ಬರು ವೈದ್ಯರ ಸೇವೆ ನೀಡಲಾಗಿತ್ತು. ಆದರೆ ಡಾ.ಲಾವಣ್ಯ ಎನ್ನುವವರು ಉನ್ನತ ಶಿಕ್ಷಣಕ್ಕೆ ತೆರಳಿದರೆ, ತರಬೇತಿಗೆ ಬಂದ ವೈದ್ಯರೂ ರಜೆ ಮೇಲೆ ತೆರಳಿದ್ದಾರೆ. ಇದರಿಂದ ಜನರ ಕಷ್ಟ ಹೇಳತೀರದು. ಇರುವ ನರ್ಸ್‌ಗಳೇ ಸೇವೆ ನೀಡುತ್ತಿದ್ದು, ಜನ ಏನಾದರೂ ತೊಂದರೆಯಾದರೆ ಹೇಗೆ ಎನ್ನುವ ಭಯದಲ್ಲಿಯೇ ಆಸ್ಪತ್ರೆಗೆ ಬರುತ್ತಿದ್ಧಾರೆ.
ಈ ಕುರಿತು ಸ್ಥಳೀಯರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ಆರ್.ನರೇಂದ್ರ ಅವರಿಗೂ ವೈದ್ಯರ ಕೊರತೆಯಿಂದ ಆಗುತ್ತಿರುವ ತೊಂದರೆಯನ್ನು ಗಮನಕ್ಕೆ ತಂದರೂ ಅವರು ರಾಜಕೀಯ ಕಾರಣಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಮಗೆರೆಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಶಾಸಕರು ಸ್ವಗ್ರಾಮ ದೊಡ್ಡಿಂದುವಾಡಿ ಸಹಿತ ಬೇರೆ ಬೇರೆ ಊರುಗಳಿಗೆ ನೀಡುವ ಮಾನ್ಯತೆಯನ್ನು ಕಾಮಗೆರೆಗೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಜಿಲ್ಲಾಧಿಕಾರಿ ಡಾ.ಡಿ.ಎಸ್.ರಮೇಶ್, ಡಿಎಚ್‌ಒ ಡಾ.ವಿಶ್ವೇಶ್ವರಯ್ಯ ಅವರಿಗೂ ಕರೆ ಮಾಡಿ ವೈದ್ಯರನ್ನು ಕೂಡಲೇ ನಿಯೋಜಿಸುವಂತೆ ಕೋರಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.


ಕಾಮಗೆರೆ ಗ್ರಾಮದ ಪಿಎಚ್‌ಸಿಗೆ ವೈದ್ಯರೇ ಇಲ್ಲ ಎನ್ನುವ ವಿಷಯ ಗಮನಕ್ಕೆ ಬಂದಿದೆ. ಕೂಡಲೇ ಡಿಎಚ್‌ಒ ಅವರಿಗೆ ತಿಳಿಸಿ ವೈದ್ಯರ ಸೇವೆ ಲಭ್ಯವಾಗುವಂತೆ ಮಾಡುತ್ತೇನೆ.

-ಡಾ.ಡಿ.ಎಸ್.ರಮೇಶ್, ಡಿಸಿ ಚಾಮರಾಜನಗರ

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

2 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

3 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

3 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

3 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

4 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

4 hours ago