ಮಂಡ್ಯ: ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬAಧ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದನ್ನು ಪರಿಶೀಲಿಸಿದ್ದು, ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದ್ದಾಗಿ ರೇಷ್ಮೆ ಸಚಿವ ಡಾ. ಕೆ.ಸಿ.ನಾರಾಯಣಗೌಡ ಅವರು ಪತ್ರ ಬರೆದು ತಿಳಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ರೇಷ್ಮೆ ಇಲಾಖೆಯನ್ನು ವಿಲೀನ ಮಾಡಿದ್ದೇ ಆದರೆ ರೇಷ್ಮೆ ಬೆಳಗಾರರಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ಇದು ರೈತರಿಗೆ ಮಾರಕವಾದ ಕ್ರಮ ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರಿಗೆ ಪತ್ರ ಬರೆದು ಸಮಸ್ಯೆಗಳ ಬಗ್ಗೆ ವಿವರವಾಗಿ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರಿಗೆ ಪತ್ರ ಬರೆದಿರುವ ಸಚಿವ ನಾರಾಯಣಗೌಡರು, ಯಥಾಸ್ಥಿತಿ ಕಾಪಾಡುವ ಬಗ್ಗೆ ಪರಿಶೀಲನೆ ನಡೆಸಿ, ಯಥಾಸ್ಥಿತಿಗೆ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಶಾಸಕ ದಿನೇಶ್ ಗೂಳಿಗೌಡರ ಮನವಿಯಲ್ಲೇನಿತ್ತು?
ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ರಾಜ್ಯ ಸರ್ಕಾರವು ಇತ್ತೀಚೆಗೆ ರೇಷ್ಮೇ ಇಲಾಖೆ, ತೋಟಗಾರಿಕೆ ಇಲಾಖೆಯನ್ನು ಮತ್ತು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುತ್ತಿರುವುದಾಗಿ ತಿಳಿದು ಬಂದಿರುತ್ತದೆ. ರೈತರು ದೇಶದ ಬೆನ್ನೆಲುಬಾಗಿದ್ದು, ಸರ್ಕಾರ ಏಕಾಏಕಿ ಈ ಇಲಾಖೆಗಳನ್ನು ವಿಲೀನಗೊಳಿಸಿದರೆ ರೈತರಿಗೆ ಮಾರಕವಾಗುವ ಸಂಭವವಿದೆ, ರಾಜ್ಯದಲ್ಲಿ ಹೈನುಗಾರಿಕೆಯು ಪ್ರಥಮ ಸ್ಥಾನದಲ್ಲಿದ್ದರೆ ರೇಷ್ಮೆ ಬೆಳೆಯು ದ್ವಿತೀಯ ಸ್ಥಾನದಲ್ಲಿದೆ. ಅಲ್ಲದೆ, ಇದು ರೈತರ ವಾಣಿಜ್ಯ ಬೆಳೆಯಾಗಿದ್ದು, ಅವರ ಆದಾಯಕ್ಕೆ ಅನುಕೂಲವಾಗಿದೆ. ಕರ್ನಾಟಕ ರಾಜ್ಯದ ರೇಷ್ಮೇಯು ದೇಶಾದ್ಯಂತ ಹೆಸರುವಾಸಿಯಾಗಿದ್ದು, ಇಂತಹ ಸಂದರ್ಭದಲ್ಲಿ ರೇಷ್ಮೆ ಇಲಾಖೆಯನ್ನು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುವ ಬದಲು ವಿಲೀನಗೊಳಿಸುತ್ತಿರುವ ಪ್ರಕ್ರಿಯೆಯನ್ನು ತಕ್ಷಣವೇ ತಡೆಯುವುದು ಅವಶ್ಯಕವಾಗಿದೆ.
ರಾಜ್ಯದ ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಯನ್ನೇ ಅವಲಂಬಿಸಿರುವ ಲಕ್ಷಾಂತರ ರೈತ ಕುಟುಂಬಗಳು ಹಾಗೂ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಈ ಮೂರು ಇಲಾಖೆಗಳ ವಿಲೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ ರೇಷ್ಮೆ ಇಲಾಖೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಮತ್ತು ರೇಷ್ಮೆ ಕೃಷಿ ಪದವಿ ಪಡೆದು ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು, ರೇಷ್ಮೆ ಬೆಳೆಯ ಅಭಿವೃಧ್ಧಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿ ರೈತರ ಸಂಕಷ್ಟವನ್ನು ನಿವಾರಿಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ ಸಚಿವ ನಾರಾಯಣಗೌಡ ಅವರಿಗೆ ಪತ್ರ ಬರೆದು ಕೋರಿದ್ದರು.
ರೇಷ್ಮೆ ಬೆಳೆಗಾರರ ಸಂಕಷ್ಟದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸರ್ಕಾರವು ಈಗ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…