ಜಿಲ್ಲೆಗಳು

ಮೈಸೂರಿನ ಸಂಸ್ಕೃತಿ ಬಗ್ಗೆ ಎಲ್ಲೆಡೆಯು ಚರ್ಚೆಯಗಬೇಕು : ಡಾ. ಎಚ್. ಸಿ ಮಹದೇವಪ್ಪ

ಮೈಸೂರು : ನಮ್ಮ ಸಂಸ್ಕೃತಿ ಕಲೆ, ಸಂಪ್ರದಾಯದ, ಧಾರ್ಮಿಕತೆಯ ಬಗ್ಗೆ ಹೊರಗಿನ ಜನರಿಗೆ ತಿಳಿಸಿ ಅದು ಎಲ್ಲೆಡೆಯು ಚರ್ಚೆಯಾಗುವಂತೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪನವರು ಹೇಳಿದರು.

ಇಂದು ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಆಯೋಜಿಸಿದ್ದ ಮೈಸೂರು ಫೆಸ್ಟ್ ಚಿತ್ರಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರಿನ ಹಬ್ಬದ ಜಾತ್ರೆಯನ್ನು ಪ್ರವಾಸೋದ್ಯಮ ಇಲಾಖೆಯವರು ಪ್ರಾರಂಭಿಸಿದ್ದಾರೆ.ನಗರ ಸಭೆ ,ಪುರಸಭೆ ,ನಗರ ಪಟ್ಟಣದಲ್ಲಿ ಸಂಚರಿಸಿ ಕಲೆ, ವಿನ್ಯಾಸ, ಚಿತ್ರಸಂತೆ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಸಬೇಕು ಎಂದರು.ಮೈಸೂರು ಫೆಸ್ಟ್ ಅನ್ನು ಬ್ರಾಂಡ್ ಮೈಸೂರು ಫೆಸ್ಟ್ ಆಗಿ ಮಾಡಬೇಕು.

ದೇಶ ಸುತ್ತಿ ಕೋಶ ಓದು ಎಂಬ ಮಾತಿನಂತೆ ಎಲ್ಲದರ ಬಗ್ಗೆಯೂ ತಿಳಿದುಕೊಳ್ಳಬೇಕು. ಈ ಹಬ್ಬ ನಿರಂತರವಾಗಿ ನಡೆಯಬೇಕು ಇದರಿಂದ ಕಲಾವಿದರಿಗೆ ಹೆಚ್ಚಿನ ಅವಕಾಶ ಸಿಗುವಂತೆ ಆಗುತ್ತದೆ ಎಂದರು.

ಇಂದು ರಾಷ್ಟ್ರಕ್ಕೆ 75 ನೇ ಗಣರಾಜ್ಯೋತ್ಸವ ಇದು ಜನರ ಉತ್ಸವ ಜನರ ಅನಿಸಿಕೆಗಳನ್ನ ಹೇಳಿಕೊಳ್ಳುವುದಕ್ಕೆ ನಮಗೆ ನಾವೇ ಸಂವಿಧಾನವನ್ನ ರಚಿಸಿಕೊಂಡ ದಿನ.

ಸಂವಿಧಾನದ ಎಲ್ಲಾ ತತ್ವಗಳು ಯಥಾವತ್ತಾಗಿ ಜಾರಿಯಾದರೆ ಜಾತ್ಯತೀತ, ಸಮಾಜವಾದಿ, ಸಾರ್ವಭೌವ, ಗಣತಂತ್ರವಾದ ಸಂವೃದ್ಧ ಭಾರತ ನಿರ್ಮಾಣವಾಗಲಿದೆ.

ಇದನ್ನು ಅಳವಡಿಸಿಕೊಂಡರೆ ಯಾವುದೇ ಬೇಧ-ಭಾವ ಇಲ್ಲದೆ ಎಲ್ಲಾ ಯುವ ಮನಸ್ಸುಗಳನ್ನು ಒಂದೆಡೆ ತರುವ ಸಂವಿಧಾನ ಜಾಗೃತಿ ಸಮಾವೇಶವನ್ನು ಮಾಡುತ್ತಿದ್ದೇವೆ.

ಇದಕ್ಕೆ ಎಲ್ಲರೂ ಸಹಕರಿಸಬೇಕು. ಭಾರತದಲ್ಲಿ ವಾಸಿಸುತ್ತಿರುವ 140 ಕೋಟಿ ಜನರು ಭಾರತೀಯರೇ ಅದನ್ನು ಒತ್ತಿ ಹೇಳುವ ಸಂವಿಧಾನವನ್ನು ಅಳವಡಿಸಿಕೊಳ್ಳಬೇಕು.

ಸಂವಿಧಾನ ಎಲ್ಲರನ್ನು ರಕ್ಷಿಸಲು ಇದೆ ಇದು ಯಾವುದೇ ಜಾತಿ, ಸಮುದಾಯದ ರಕ್ಷಣೆಗೆ ಸೀಮಿತವಾಗಿಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಅವರೂ ಮಾತನಾಡಿ ಮೈಸೂರು ದಸರಾ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಕಾರಣಾಂತರಗಳಿಂದ ಮಾಡಲು ಸಾಧ್ಯವಾಗಲಿಲ್ಲ.

ಆದರೆ ಈ ಸಮಯದಲ್ಲಿ ಪ್ರವಾಸೋದ್ಯಮ ಇಲಾಖೆಯೊಂದಿಗೆ ಕೈಜೋಡಿಸಿ ಟೂರಿಸಮ್ ಕ್ಯಾಲೆಂಡರ್ ಅನ್ನು ಹೊರತರುತ್ತಿದ್ದೇವೆ. ಈ ಉತ್ಸವವು ಸ್ಥಳೀಯ ಹಾಗೂ ಅಂತರ ರಾಷ್ಟೀಯ ಕಲಾವಿದರ ಮಾರುಕಟ್ಟೆಗೆ ಅವಕಾಶ ಕಲ್ಪಿಸಿಕೊಟ್ಟಿದೆ.

ಇಂದಿನ ಯುವಜನರಿಗೆ ನಮ್ಮ ಕಲೆಯ ಹಾಗೂ ಸಂಸ್ಕೃತಿಯ ಬಗ್ಗೆ ತಿಳಿಸಿ

 

ಕೊಡಲು ಮೈಸೂರು ಫೆಸ್ಟ್ ಒಂದು ಬ್ರಿಡ್ಜ್ ಆಗಿದೆ.ದಸರಾ ಸಂದರ್ಭದಲ್ಲಿ ಪ್ರವಾಸಿ ಚಟುವಟಿಕೆಗಳಿಗಾಗಿ ಬಿಡುಗಡೆಯಗಿದ್ದ ಹಣವನ್ನು ಈ ಸಂದರ್ಭದಲ್ಲಿ ಬಳಸಿಕೊಂಡು ಚಿತ್ರಸಂತೆ, ಸ್ಥಳೀಯ ಕಲೆಗಳ ಪ್ರದರ್ಶನ, ಆಹಾರಮೇಳ ಹಾಗೂ ಮೂರು ದಿನಗಳು ವಿಶ್ವ ಪ್ರಸಿದ್ಧ ಅಂತರ್ರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಗಳು ನಡೆಯುತ್ತಿದ್ದು ಮೈಸೂರು ದಸರಾ ಮಾರುಕಳುಹಿಸುತ್ತಿದೆ ಎಂದರೆ ತಪ್ಪಾಗಲಾರದು.

ಬಂದಿರುವಂತಹ ಪ್ರವಾಸಿಗರಿಗೆ ಮೈಸೂರಿನ ಎನ್ನಷ್ಟು ವಿಶೇಷ ವಿಷಯಗಳನ್ನು ತಿಳಿದುಕೊಳ್ಳಲು ಇದು ಸಹಕಾರಿಯಾಗಲಿದೆ. ಮೈಸೂರು ಜನತೆ ಕಾರ್ಯಕ್ರಮದಲ್ಲಿ ಭಾಗವಸಿಯುತ್ತಿರುವ ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಕಲಾವಿದರ ಕಲೆಯನ್ನ ಬೆಳೆಸಿ ಪ್ರೋತ್ಸಾಹ ನೀಡಬೇಕು.

ಮಕ್ಕಳಲ್ಲಿರುವ ಕಲೆಯನ್ನ ಅನಾವರಣ ಮಾಡುವ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಇದ್ದಕ್ಕೆ ಎಲ್ಲರೂ ಸಹಕರಿಸಬೇಕು.
ಫೆಸ್ಟ್ ಅನ್ನು ಯಶಸ್ವಿಯಾಗಿ ಮಾಡುವುದರ ಮೂಲಕ ನಿರಂತರವಾಗಿ ನಡೆಯಲು ಪ್ರೋತ್ಸಾಹ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಸದಸ್ಯರಾದ ತನ್ವಿರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಮರೀತೀಬ್ಬೆಗೌಡ, ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಜಿಲ್ಲಾ ಪೊಲೀಸ್ ಆಯುಕ್ತರಾದ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಾ. ಕೆ. ಎಂ ಗಾಯಿತ್ರಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಕೆ ಎಂ ಸವಿತಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago