ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಈಗ ಮರಿ ಚಿರತೆಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆಯನ್ನು ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಮೂರೂ ಮರಿಗಳನ್ನು ಒಂದೇ ಬೋನಿನಲ್ಲಿ ಇರಿಸಲಾಗಿದ್ದು ತಾಯಿ ಚಿರತೆ ಇವುಗಳನ್ನು ಹುಡುಕಿಕೊಂಡು ಬರುವ ನಿರೀಕ್ಷೆ ಇದೆ.
ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಚಿರತೆಗಳನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಈ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಮರಿಗಳ ಜತೆ ಇರುತ್ತಿದ್ದರೆ ರೈತರ ಮೇಲೆ ದಾಳಿ ಮಾಡುವ ಸಂಭವ ಇತ್ತು. ಆದರೆ ಅದು ಗ್ರಾಮಸ್ಥರ ಸದ್ದು ಕೇಳಿ ಚಿರತೆ ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡಿದೆ.
ಚಿರತೆಗಳು ಊರೊಳಗೆ ಬಂದು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿವೆ ಎಂಬ ಗ್ರಾಮಸ್ಥರ ಹೇಳಿಕೆ ನಿಜವಾಗಿದ್ದು ಕಬ್ಬಿನ ಗದ್ದೆ ಕಟಾವಿಗೆ ಸಿದ್ದವಾಗಿರುವ ರೈತರಲ್ಲಿ ಆತಂಕ ಮೂಡಿಸಿದೆ.
ಎರಡು ವಾರಗಳ ಹಿಂದಷ್ಟೇ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ಬಲಿಯಾಗಿದ್ದಳು. ಇದಕ್ಕೂ ಮುನ್ನ ಮಹಾರಾಜ ಕಾಲೇಜು ವಿದ್ಯಾರ್ಥಿಯೊಬ್ಬ ಚಿರತೆ ದಾಳಿಯಲ್ಲಿ ಮೃತಪಟ್ಟಿದ್ದ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…