Mysore
21
mist

Social Media

ಸೋಮವಾರ, 23 ಡಿಸೆಂಬರ್ 2024
Light
Dark

3ದಿನ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನ

 ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ

ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಮೈಸೂರು-ಚಾ.ನಗರ ಜಿಲ್ಲಾ ಅಧ್ಯಕ್ಷ ಟಿ.ಎಸ್.ಲೋಕೇಶ್ ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉದ್ಯಮಿಗಳು, ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿ ಪ್ರಾಯೋಗಿಕ ಅಭಿವೃದ್ಧಿಪಡಿಸುವ ಆರ್ಥಿಕ, ಕೈಗಾರಿಕಾ, ವ್ಯಾಪಾರಿಕ ಚಟುವಟಿಕೆಗಳನ್ನು ಮುಂದುವರಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚಿಸುವುದು. ಸರ್ಕಾರವು ಕಲ್ಪಿಸಿರುವ ಕ್ಲಸ್ಟರ್ ಆಧಾರಿತ ವಿಧಾನವನ್ನು ಕೈಗಾರಿಕೋದ್ಯಮಿಗಳು, ವ್ಯಾಪಾರ ಸಮುದಾಯವನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಸ್ಟಾರ್ಟ್ ಅಪ್ ಘಟಕವನ್ನು ಬಲಪಡಿಸುವುದು. ನಿರೀಕ್ಷಿತ ಉದ್ಯಮಿಗಳಿಗೆ ಮಾರ್ಗದರ್ಶನ ನೀಡುವುದು. ಕರ್ನಾಟಕ ರಾಜ್ಯಾದ್ಯಂತ ರೈತ ಸಮುದಾಯವನ್ನು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ತಂತ್ರಜ್ಞಾನ ಆಧಾರಿತ ಕೃಷಿ ಪರಿಹಾರಗಳನ್ನು ಅನ್ವೇಷಿಸುವುದು ಅಲ್ಲದೆ, ೨೫೦ ಕ್ಕೂ ಅಧಿಕ ಮಳಿಗೆಗಳಲ್ಲಿ ಉತ್ಪನ್ನಗಳು, ಸೇವೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ವಿಶೇಷ ಪೆವಿಲಿಯನ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿನ ಅವಕಾಶಗಳನ್ನು ಬಿಂಬಿಸಲಾಗುತ್ತದೆ. ವೃತ್ತಿ ಸಮಾಲೋಚನೆಯನ್ನು ನಡೆಸುವ ಮೂಲಕ ವಿದ್ಯಾರ್ಥಿಗಳೊಂದಿಗೆ ವರ್ಚುವಲ್ ಸಂಪರ್ಕ ಸಾಧಿಸಲು ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಮಾಡಲಾಗುವುದು ಎಂದರು.
ಮಹಾರಾಷ್ಟ್ರದ ವೀರಶೈವ ಇಂಟರ್‌ನ್ಯಾಶನಲ್ ಅಸೋಸಿಯೇಷನ್ (ವಿಐಎ) ನೊಂದಿಗೆ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಬಸವ ಸಮಿತಿ ಸಹಯೋಗದಲ್ಲಿ ಸಮ್ಮೇಳನ ನಡೆಯಲಿದೆ. ೨೦೧೩ರಲ್ಲಿ ಪ್ರಾರಂಭವಾದ ಐಎಲ್‌ವೈಎಫ್ ೨೦೨೩ರಲ್ಲಿ ತನ್ನ ೧೦ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು ೧೫೦೦ ಸದಸ್ಯರಿದ್ದಾರೆ. ಇದರ ಅಂಗವಾಗಿ ಸಮ್ಮೇಳನ ನಡೆಸಲಾಗುತ್ತಿದೆ ಎಂದು ವಿವರಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ