ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.
ಅ.13 ರಿಂದ 16 ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.೧೬ ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.
ಮುಕ್ಕಾಲು ಗಂಟೆ ಮಾತುಕತೆ:
ತಮ್ಮನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.
ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬAಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಭೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್.ಎಲ್. ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್ ಅವರಿಗೆ ಸಚಿವರು ನೀಡಿದರು.
ಕೆಪಿಎಸ್‌ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಮಾಧ್ಯಮ ಸಲಹೆಗಾರ ಪ್ರದೀಪ್ ಕುಮಾರ್ ಹಾಜರಿದ್ದರು.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…