ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ
ಅಂತರಸಂತೆ: ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳು ಪತ್ತೆಯಾಗಿದ್ದು, ಎಲ್ಲವೂ ಆರೋಗ್ಯದಿಂದಿರುವುದು ಕಂಡು ಬಂದಿದೆ.
ತಾಯಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟ ಬಳಿಕ ಈ ಮೂರು ಹುಲಿ ಮರಿಗಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಪತ್ತೆಯಾಗದ ಹುಲಿ ಮರಿಗಳು ಅರಣ್ಯದಲ್ಲಿ ಅಳವಡಿಸಲಾದ ಕ್ಯಾಮೆರಾ ಟ್ಯ್ರಾಪಿಂಗ್ನಲ್ಲಿ ಸೆರೆಯಾಗಿವೆ.
ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪದ ಜಮೀನಿನಲ್ಲಿ ನವೆಂಬರ್ 12ರಂದು ಕೊಳೆತ ಸ್ಥಿತಿಯಲ್ಲಿ ಸುಮಾರು 12-13 ವರ್ಷದ ಹೆಣ್ಣುಹುಲಿಯ ಕಳೇಬರ ಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಆಗ ಅನಾಥವಾದ ಮೂರು ಹುಲಿ ಮರಿಗಳ ರಕ್ಷಣೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಇದೀಗ ಹುಲಿ ಮರಿಗಳು ಪತ್ತೆಯಾಗುವುದರೊಂದಿಗೆ ಅರಣ್ಯಾಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಲಿಗಳ ಚಲನವಲನವನ್ನು ಇನ್ನೊಂದಷ್ಟು ಕಾಲ ಗಮನಿಸಿ ಇವುಗಳನ್ನು ಹಿಡಿದು ಸಂರಕ್ಷಿಸಬೇಕೇ ಅಥವಾ ಕಾಡಿನಲ್ಲಿಯೇ ಬಿಟ್ಟು ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕೇ ಎಂದು ನಿರ್ಧಾರ ಕೈಗೊಳ್ಳಲಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…