ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ.
ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ ಎಂಬವರಿಗೆ ಸೇರಿದ ಎಮ್ಮೆಗಳ ಮೇಲೆ ಹುಲಿ ದಾಳಿ ಮಾಡಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.
ಕೆಲವು ದಿನಗಳ ಹಿಂದೆಯಷ್ಟೇ ಇದೇ ಭಾಗದಲ್ಲಿ ಹಸುವೊಂದು ಹುಲಿ ದಾಳಿಯಿಂದ ಸಾವನ್ನಪ್ಪಿತ್ತು. ಕಳೆದ ತಿಂಗಳಷ್ಟೇ ಸಿದ್ದಾಪುರ ವ್ಯಾಪ್ತಿಯಲ್ಲಿ ಜಾನುವಾರು ಭಕ್ಷಕ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಹುಲಿ ಉಪಟಳ ನೀಡಲು ಆರಂಭಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ತಾಲ್ಲೂಕು ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಕಟ್ಟೆರ ಈಶ್ವರ ತಿಮ್ಮಯ್ಯ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಮತ್ತು ಹೆಚ್ಚಿನ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದರು.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…