ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ.
ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಕೊನೆಯುಸಿರೆಳೆದಿದ್ದಾರೆ.
ಬೊಮ್ಮಾಡು ಹಾಡಿ ನಿವಾಸಿ ದಾಸ (೫೩) ಮೃತರಾದವರು.
ಮುಂಜಾನೆ ಹಾಡಿ ಸಮೀಪ ಹಸುವಿನ ಮೇಲೆ ಮೊದಲು ಹುಲಿ ದಾಳಿ ಮಾಡಿತ್ತು. ನಂತರ ಮಧ್ಯಾಹ್ನ ಮತ್ತೆ ಬಂದ ಹುಲಿ ದಾಸ ಎಂಬುವವರ ಮೇಲೆ ದಾಳಿ ಮಾಡಿದೆ. ಇದರಿಂದ ಗಂಭೀರ ಗಾಯಗೊಂಡ ದಾಸನನ್ನು ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುವಾಗ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ನಂತರ ಶವ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.
ನಾಗರಹೊಳೆ ಉದ್ಯಾನವನಕ್ಕೆ ಹೊಂದಿಕೊಂಡಿರುವ ಗ್ರಾಮವಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…
ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…
ಕೆ.ಬಿ.ರಮೇಶನಾಯಕ ಮೊದಲ ಹಂತದ ಮೂರು ರಸ್ತೆಗಳಲ್ಲಿ ಎರಡು ಪೂರ್ಣ ರಸ್ತೆ ಜತೆಗೆ ಫುಟ್‌ಪಾತ್, ಚರಂಡಿ ಕಾಮಗಾರಿಯೂ ಪೂರ್ಣ ದಸರಾ ಬಳಿಕ…
ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…