ಜಿಲ್ಲೆಗಳು

ಸಕ್ಕರೆ ನಾಡು ಮಂಡ್ಯದಲ್ಲಿ ಚಿರತೆ ಆಯ್ತು, ಈಗ ಹುಲಿ ಹಾವಳಿ

ಮಂಡ್ಯ ಜಿಲ್ಲೆಯ ಜನತೆ ಚಿರತೆ ಹಾವಳಿಯಿಂದ ಈಗಾಗಲೇ ಬೇಸತ್ತಿದ್ದು ಇದೀಗ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ( ಜನವರಿ 15 ) ಸಂಜೆ 4 ಗಂಟೆ ಸಮಯಕ್ಕೆ ಜಮೀನೊಂದರಲ್ಲಿ ಹುಲಿ ಓಡಾಡುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.

ಇನ್ನು ಹುಲಿ ರಸ್ತೆ ದಾಟುತ್ತಿರುವ ವಿಡಿಯೊವನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊಗಳನ್ನು ಕಂಡ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಹುಲಿ ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

andolana

Recent Posts

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

8 mins ago

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…

32 mins ago

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

1 hour ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

2 hours ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

2 hours ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

2 hours ago