ಜಿಲ್ಲೆಗಳು

ಹುಲಿಯ ಹಲ್ಲುಗಳು, ಉಗುರುಗಳ ಸಾಗಣೆ; ಇಬ್ಬರ ಬಂಧನ

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೆ ಬಾಳ ಗ್ರಾಮದ ಹನುಮೇಶ್ ಬಿನ್ ಲೇಟ್ ಹೊನ್ನಪ್ಪ (29) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ : ಸೋಮವಾರ ರಾತ್ರಿ 8:00 ಸಮಯದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ ಜಿ ಪಾಳ್ಯ ಗ್ರಾಮದ ಅಡ್ಡ ರಸ್ತೆ ಮಾರ್ಗವಾಗಿ ದ್ವಿಚಕ್ರವಾಹನ ಸಂಖ್ಯೆ ka-10 ಎಲ್ 3616 ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಕಳ್ಳ ಮಾರುಕಟ್ಟೆಗೆ ಕೊಳ್ಳೇಗಾಲ ಕಡೆಗೆ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಸಬ್ ಇನ್ಸ್ಪೆಕ್ಟರ್ ವಿಜಯ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿಯ 40 ಉಗುರುಗಳು ಹಾಗೂ ಹುಲಿಯ ಎರಡು ಹಲ್ಲುಗಳನ್ನು ವಶಪಡಿಸಿಕೊಂಡಿದ್ದು ಇವರ ವಿರುದ್ಧ ವನ್ಯಜೀವಿ ಕಾಯ್ದೆ,2972 ಶೆಡ್ಯೂಲ್ ಒಂದರ ಅಡಿಯಲ್ಲಿ 39(ಡಿ ) 50,51, ರ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಮುಖ್ಯಪೇದೆಗಳಾದ ಸ್ವಾಮಿ ತಕೀಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್ ಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.

andolanait

Recent Posts

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

3 mins ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

22 mins ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

48 mins ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

1 hour ago

ಸರಗೂರಿನ ನೇರಳೆ ಗ್ರಾಮಕ್ಕೆ ನೇರ ಬಸ್‌ ಕಲ್ಪಿಸಿ : ಗ್ರಾಮಸ್ಥರ ಆಗ್ರಹ

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…

1 hour ago

ಉಡುಪಿಯಲ್ಲೊಂದು ಅಪರೂಪದ ಘಟನೆ : ಗ್ಯಾಸ್‌ ಓಟಿಪಿ ವ್ಯಕ್ತಿ ಜೀವ ಉಳಿಸಿದ್ದೇಗೆ?

ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…

2 hours ago