ಜಿಲ್ಲೆಗಳು

ಗ್ರಾಮಸ್ಥರನ್ನು ನಿದ್ದೆಗೆಡಿಸುತ್ತಿರುವ ಹುಲಿ ಸೆರೆಗೆ ಕಾರ್ಯಾಚರಣೆ

ಹೆಚ್. ಡಿ ಕೋಟೆ : ತಾಲ್ಲೂಕಿನ ತಾರಕ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಾಣಿಸಿಕೊಂಡು ಎರಡು ಮೂರು ಹಸುಗಳನ್ನು ತಿಂದು ಹಾಕಿದ್ದು ಗ್ರಾಮಸ್ಥರಲ್ಲಿಯೂ ಭಯಭೀತಿಯನ್ನು ಉಂಟುಮಾಡಿದೆ. ಹುಲಿಯನ್ನು ಸೆರೆ ಹಿಡಿಯಲು ಎಸ್ ಟಿ ಪಿ ಎಫ್  ಸಿಬ್ಬಂದಿಗಳು ಕಾರ್ಯಾಚರಣೆ ತೊಡಗಿದ್ದಾರೆ

ಹುಲಿಯ ಉಪಟಳದ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಗಳು  ಸ್ಥಳವನ್ನು ಪರಿಶೀಲನೆ ಮಾಡಿ ಹುಲಿ ಇರುವುದನ್ನು ಖಚಿತಪಡಿಸಿಕೊಂಡು ನಂತರ ಮತ್ತೆ ಗೂಡು ಆನೆ ಶಿಬಿರದಿಂದ ಅಶ್ವತ್ಥಾಮ ಮತ್ತು ಬಲರಾಮ ಆನೆಗಳನ್ನು ಕಾರ್ಯಚರಣೆಗೆ ತೊಡಗಿಸಿಕೊಂಡಿದ್ದು ಅಂತರ ಸಂತೆ ವಲಯದ ಸಿಬ್ಬಂದಿಗಳು ಮೇಟಿಕುಪ್ಪೆ ವಲಯದ ಸಿಬ್ಬಂದಿಗಳು ಸೇರಿದಂತೆ ಎಸ್ ಟಿ ಪಿ ಎಫ್ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆಯನ್ನು ಕೈಗೊಂಡು ಹುಲಿಯನ್ನು ಸೆರೆ ಹಿಡಿಯಲು ನಿರತರಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಅಂತರಸಂತೆ ವಲಯದ ಅರಣ್ಯ ಅಧಿಕಾರಿ ಸಿದ್ದರಾಜು, ಡಿ ಆರ್ ಎಫ್ ಓ ಆಂತೋನಿ, ಮಂಜುನಾಥ್ ಆರಾಧ್ಯ, ಚಂದನ್ ಮತ್ತು ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

6 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

6 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

6 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

6 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

6 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

6 hours ago